ಬೆಂಗಳೂರು : ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭ್ರಷ್ಟಾಚಾರದ ಅಸ್ತ್ರ ಬಳಸಿ ವಾಗ್ದಾಳಿ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ಕೊಟ್ಟಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು, ಕಾಂಗ್ರೆಸ್ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಕಾಂಗ್ರೆಸ್ ಭ್ರಷ್ಟಾಚಾರ ಹುಟ್ಟು ಹಾಕಿದ ರಕ್ತಬೀಜಾಸುರ ಪಕ್ಷ ಎಂದು ಲೇವಡಿ ಮಾಡಿದ್ದಾರೆ.
ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಕಾಲದಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಾಲದವರೆಗೂ ಭ್ರಷ್ಟಾಚಾರ ತಾಂಡವವಾಡ್ತಿತ್ತು. ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ಯಾಕೆ ಬಂದ್ ಮಾಡಿತ್ತು ಎಂದು ಜೋಷಿ ಅವರು ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ : ಅವ್ರಿಗೆ 36 ಹೆಂಡತಿಯರು, 316 ಮಕ್ಕಳು ಇದ್ದಿದ್ರೆ..! : ಸಿ.ಟಿ ರವಿ ವ್ಯಂಗ್ಯ
ಹಲ್ಲಿಲ್ಲದ ಹುಲಿ ಮಾಡಿ, ಎಸಿಬಿ (ACB) ಗೂ ಪವರ್ ಇಲ್ಲದಂತೆ ಮಾಡಿದ್ದರು. ನಾವು ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿದ್ದೇವೆ. ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರ ಲೋಕಾಯಕ್ತವನ್ನು ತಡೆಯಬಹುದಿತ್ತು. ಆದರೆ, ನಾವು ತಡೆಯಲಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ(BJP) ಭ್ರಷ್ಟಾಚಾರದ ವಿರುದ್ಧವಾಗಿದೆ, ಅದಕ್ಕೆ ಲೋಕಯುಕ್ತ ಬಲ ಮಾಡಿದ್ದು ಎಂದರು. ಅಲ್ಲದೆ, ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು, ಯಾರನ್ನೂ ಉಳಿಸುವ ಕೆಲಸ ಮಾಡಲ್ಲ ಎಂದು ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.