ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಪದೇ ಪದೆ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಏಕವಚನದಲ್ಲೇ ವಾಗ್ದಾಳಿ ನಡೆದಿದ್ದಾರೆ.
ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆಗೂ ನರೇಂದ್ರ ಮೋದಿ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೂ ಮೋದಿ. ವಿಧಾನಸಭೆ, ಲೋಕಸಭೆ ಚುನಾವಣೆಗೂ ಮೋದಿ. ಏನ್ ಮೋದಿ ಬಂದು ಇಲ್ಲಿ ಆಳುತ್ತಾನಾ? ಎಂದು ಖರ್ಗೆ ಕಿಡಿಕಾರಿದ್ದಾರೆ.
ಮುಂದುವರಿದು ವಾಗ್ದಾಳಿ ನಡೆಸಿರುವ ಅವರು, ನರೇಂದ್ರ ಮೋದಿ ಶೇ.51ರಷ್ಟು ಮತ ಪಡೆದು ಅಧಿಕಾರಕ್ಕೆ ಬಂಧಿಲ್ಲ. ಶೇ.60ರಷ್ಟು ಜನರು ಪ್ರಧಾನಿ ಮೋದಿ ವಿರುದ್ಧ ಇದ್ದಾರೆ ಎಂದು ಖರ್ಗೆ ಹೇಳಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ಭ್ರಷ್ಟಾಚಾರ ಹುಟ್ಟು ಹಾಕಿದ ರಕ್ತಬೀಜಾಸುರ : ಜೋಶಿ ಲೇವಡಿ
ಹಿಂದೂ, ಮುಸ್ಲಿಮರ ಮಧ್ಯೆ ಜಗಳ
ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅನಾಹುತಗಳೇ ಸಂಭವಿಸುತ್ತಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಮರ ಮಧ್ಯೆ ಜಗಳ ಹಚ್ಚುವ ಸರ್ಕಾರಗಳಿವೆ. ಇವುಗಳನ್ನ ಕಿತ್ತೊಗೆಯಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರ ನೀಡಿದ ಅಭಿವೃದ್ಧಿ ಕೆಲಸಗಳನ್ನ ಪುನಃ ಪಡೆಯಲು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಬೇಕು. ಪ್ರಧಾನಿ ಮೋದಿ ಕಲಬುರಗಿಗೆ ಬಂದಾಗ ಎರಡು ಕಡೆ ಭಾಷಣ ಮಾಡಿದ್ದಾರೆ. ಅವರಲ್ಲಿ ಅಧಿಕಾರ ಇದೆ, ಪಾಪ ಭಾಷಣ ಮಾಡಲಿ.
ಸರ್ಕಾರಿ ಕಾರು, ಸರ್ಕಾರಿ ವಿಮಾನ ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಟೀಕಿಸೋದು ಎಷ್ಟು ಸರಿ ಎಂಬದುನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.