ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ದೊಡ್ಡೆ ಎಡವಟ್ಟು ನಡೆದಿದೆ.
ಹೌದು, ಕಲಬುರ್ಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಿರ್ಮಿಸಲಾಗಿರೋ ಹೆಲಿಪ್ಯಾಡ್ ಬಳಿ ಇಂದು ಘಟನೆ ನಡೆದಿದೆ.
ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ಗೆ ತಯಾರಿಗಳು ನಡೆದಿತ್ತು. ಈ ವೇಳೆ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿವೆ. ಪೈಲಟ್
ಹೆಲಿಕಾಪ್ಟರ್ ಅನ್ನು ಲ್ಯಾಂಡ್ ಮಾಡದೇ ಬೇರೆಡೆಗೆ ತೆಗೆದುಕೊಂಡಿದ್ದಾರೆ. ಈ ಘಟನೆ ಸ್ಥಳದಲ್ಲಿ ಭಾರೀ ಆತಂಕ ಸೃಷ್ಟಿ ಮಾಡಿತ್ತು.
ಲ್ಯಾಂಡಿಗ್ ವೇಳೆ ಭದ್ರತಾ ಲೋಪ
ಹೆಲಿಪ್ಯಾಡ್ ಸುತ್ತ ಜಮೀನಿನನಲ್ಲಿ ಪ್ಲಾಸ್ಟಿಕ್ ಚೀಲಗಳು ಹಾಕಲಾಗಿತ್ತು. ಲ್ಯಾಂಡಿಂಗ್ ವೇಳೆ ಹೆಲಿಕ್ಯಾಪ್ಟರ್ ಮೇಲೆ ಆ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿವೆ. ಈ ವೇಳೆ ಪೊಲೀಸರು ಪ್ಲಾಸ್ಟಿಕ್ ಚೀಲಗಳ ತೆರವು ಮಾಡಿದ್ದಾರೆ.
ಇದನ್ನೂ ಓದಿ : ಬಿಜೆಪಿ ಶಾಸಕ ಮಾಡಾಳ್ ಬಂಧನ ಆಗಲೇಬೇಕು : ಬಿ.ಎಸ್. ಯಡಿಯೂರಪ್ಪ
ನಂತರ ಒಂದೆರಡು ಸುತ್ತು ಹಾರಾಟ ನಡೆಸಿ ಹೆಲಿಕ್ಯಾಪ್ಟರ್ ಲ್ಯಾಂಡ್ ಮಾಡಲಾಗಿದೆ. ಹೆಲಿಕ್ಯಾಪ್ಟರ್ ಮೇಲೆ ಪ್ಲಾಸ್ಟಿಕ್ ಚೀಲಗಳು ತೂರಿ ಬಂದಿದ್ದರಿಂದ ಅಧಿಕಾರಿಗಳು ಮತ್ತು ಪೊಲೀಸರು ಕಕ್ಕಾಬಿಕ್ಕಿಯಾಗಿದ್ದಾರೆ. ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳದೇ ಇರೋದ್ರಿಂದ ಭದ್ರತಾ ಲೋಪ ಆಗಿದೆ.