ಬೆಂಗಳೂರು : ಚನ್ನಗಿರಿ ಬಿಜೆಪಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(ಕೆಎಸ್‌ಡಿಎಲ್) ಮಾಜಿ ಅಧ್ಯಕ್ಷರಾಗಿರುವ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ಕ್ರಮಕ್ಕೆ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಗೆ ವರದಿ ಸಲ್ಲಿಸಲಾಗಿದೆ.
ಈ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಮಾಹಿತಿ ನೀಡಿದ್ದಾರೆ.
ಮಾಡಾಳ್ ಬಂಧನ ಆಗಲೇಬೇಕು
ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಡಾಳ್ ವಿರೂಪಾಕ್ಷಪ್ಪ ಕ್ಷಮಿಸಲಾರದಂತಹ ಅಕ್ರಮ ಎಸಗಿ ತಪ್ಪು ಮಾಡಿದ್ದಾರೆ. ಹೀಗಾಗಿ ಅವರ ಬಂಧನ ಆಗಲೇಬೇಕು. ಅವರ ವಿರುದ್ಧ ಕ್ರಮತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.ನೀಡಿದ್ದಾರೆ.
ಇದನ್ನೂ ಓದಿ : ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕರಿಗಾಗಿ ಶೋಧ ಶುರು
ಕೆಎಸ್‌ಡಿಎಲ್‌ಗೆ ರಾಸಾಯನಿಕ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು 40 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ, ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದರು.
ಮಾಡಾಳ್ ಪತ್ತೆಗೆ ಅಧಿಕಾರಿಗಳ ತಲಾಶ್
ಪ್ರಶಾಂತ್ ಅವರು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಆಗಿದ್ದಾರೆ. ವಿರೂಪಾಕ್ಷಪ್ಪ ಕೂಡ ಆರೋಪಿ ಎಂದು ಈ ಪ್ರಕರಣದ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದ್ದು, ಪ್ರಕರಣದ ಬಳಿಕ ಮಾಡಾಳ್ ವಿರೂಪಾಕ್ಷಪ್ಪ ಅವರು ನಾಪತ್ತೆ ಆಗಿದ್ದಾರೆ. ಅವರ ಪತ್ತೆಗೆ ಅಧಿಕಾರಿಗಳು ತಲಾಶ್ ಆರಂಭಿಸಿದ್ದಾರೆ.