Wednesday, January 22, 2025

ಬೆಂಗಳೂರಿಗರ ಆರೋಗ್ಯಕ್ಕೆ ವಿಶೇಷ ವ್ಯವಸ್ಥೆ : ಸಿಎಂ ಬೊಮ್ಮಾಯಿ

ಬೆಂಗಳೂರು : ಬೆಂಗಳೂರಿನ ನಾಗರಿಕರ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಅತಿ ಹೆಚ್ಚಿನ ಗಮನವನ್ನು ನೀಡಲಾಗಿದ್ದು, ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ವತಿಯಿಂದ ಜಯನಗರದಲ್ಲಿ ಆಯೋಜಿಸಿದ್ದ ಜನೌಷಧಿ ದಿವಸ್ ಆಚರಣೆ-2023 ಮತ್ತು 100 ನೇ ಜನೌಷಧಿ ಕೇಂದ್ರವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿ ಮಾತನಾಡಿದ್ದಾರೆ.

ಬೆಂಗಳೂರಿನ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು ಪ್ರತಿ ವಾರ್ಡಿಗೆ ನಮ್ಮ ಕ್ಲಿನಿಕ್ ಪ್ರಾರಂಭ ಮಾಡಲಾಗಿದೆ. ಈಗಾಗಲೇ 100 ಪ್ರಾರಂಭ ಮಾಡಲಾಗಿದ್ದು, ಇನ್ನೂ ನೂರು ಇದೇ ವಾರದಲ್ಲಿ ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದ್ದಾರೆ.

4  ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

240 ವಾರ್ಡುಗಳಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭವಾಗುತ್ತಿದೆ. ಸುಮಾರು 19 ಪಿ.ಹೆಚ್.ಸಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. 4  ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಎಲ್ಲೆಡೆ ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ. ಇಂದು ಸಂಚಾರಿ ಆಸ್ಪತ್ರೆಯನ್ನೂ ಹಾಗೂ  ಡಯಾಲಿಸಿಸ್ ಕೇಂದ್ರವನ್ನೂ ಉದ್ಘಾಟಿಸಲಾಗಿದ್ದು, ರೋಗಿಗಳ ಮುಖದಲ್ಲಿ ಮಂದಹಾಸ ನೋಡಿದಾಗ ಸಾರ್ಥಕ ಭಾವ ಮೂಡುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ : H3N2 : ರಾಜ್ಯಕ್ಕೆ ಹೊಸ ಗೈಡ್ ಲೈನ್ಸ್ : ಇವರಿಗೆ ಮಾತ್ರ ಅನ್ವಯ

ಮೋದಿಗೆ ಬಡತನ ಅಂದ್ರೇನು ಅಂತ ಗೊತ್ತಿದೆ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿ ಮತ್ತು ಬಡವರ ಬಗ್ಗೆ ಅವರಿಗಿರುವ ಕಾಳಜಿಯನ್ನು ತೋರಿಸುತ್ತದೆ. ಅವರು ಪ್ರಧಾನಿಯಾಗುವ ಮುನ್ನ ಅತ್ಯಂತ ಕಡಿಮೆ ದರದಲ್ಲಿ ಔಷಧಗಳನ್ನು ನೀಡುವ ಕಾರ್ಯಕ್ರಮ ಇರಲಿಲ್ಲ. ಆಡಳಿತಗಾರರಿಗೆ ಸೂಕ್ಷ್ಮಾತಿಸೂಕ್ಷ್ಮ ವಿಷಯಗಳ ಬಗ್ಗೆ ಕಳಕಳಿ ಇರಬೇಕು. ಬಡತನವನ್ನು ಅನುಭವಿಸಿದಾಗ, ಹತ್ತಿರದಿಂದ ನೋಡಿ ಬಡವರ ಸಂಕಷ್ಟವನ್ನು ತಿಳಿದುಕೊಂಡಾಗ ಮಾತ್ರ ಬರುತ್ತದೆ. ನರೇಂದ್ರ ಮೋದಿಯವರಿಗೆ ಬಡತನ ಎಂದರೇನು ಎಂದು ತಿಳಿದಿದೆ ಎಂದು ಹೇಳಿದ್ದಾರೆ.

ಜನರು ನೂರು ರೂ.ಗಳೂ ಸಹ ಇಲ್ಲದ ಸ್ಥಿತಿಯಲ್ಲಿರುತ್ತಾರೆ. ಔಷಧಿ ಕಂಪನಿಗಳ ದರ ದಕ್ಕೆ ಹತ್ತುಪಟ್ಟು ಮಾಡಿರುತ್ತಾರೆ.  ಬಡವರ ಕಷ್ಟವನ್ನು ಅರ್ಥಮಾಡಿಕೊಂಡಿರುವ ಪ್ರಧಾನಿಗಳು ಬಡವರಿಗಾಗಿ ಸುಲಭ ಮತ್ತು ಕಡಿಮೆ ದರದಲ್ಲಿ ದೊರೆಯಬೇಕೆಂದು, ಗುಣಮುಖರಾಗಿ ಆರೋಗ್ಯವಂತರಾಗಬೇಕು, ಭಾರತ ಸಶಕ್ತವಾಗಬೇಕಾದರೆ, ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳು ತಲುಪಬೇಕೆಂದು ಇಂಥ ಕಾರ್ಯಕ್ರಮ ರೂಪಿಸಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES