ಬೆಂಗಳೂರು : ಕೋಟಿ ಕೋಟೆ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕೊನೆಗೂ ದಾವಣಗೆರೆ ನಗರದ ತಮ್ಮ ನಿವಾಸದ ಎದುರು ಪ್ರತ್ಯಕ್ಷರಾಗಿದ್ದಾರೆ.
ಹೈಕೋರ್ಟ್ ನಲ್ಲಿ ಷರತ್ತುಬದ್ಧ ಜಾಮೀನು ಮಂಜೂರಾದ ಬೆನ್ನಲ್ಲೇ ಶಾಸಕರು ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ದರ್ಶನ ನೀಡಿದ್ದಾರೆ. ಈ ವೇಳೆ ಶಾಸಕರನ್ನು ಕಂಡ ಅವರ ಬೆಂಬಲಿಗರು ಕುಣಿದು ಕುಪ್ಪಳಿಸಿದ್ದಾರೆ.
ಮಧ್ಯಂತರ ಜಾಮೀನು ಮಂಜೂರು
ಪ್ರಕರಣ ಸಂಬಂಧ ಪ್ರಕರಣದ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣ ಸಂಬಂಧ ವಿಚಾರಣೆ ರುವ ಕೋರ್ಟ್, ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.
ಇದನ್ನೂ ಓದಿ : ಮಾಡಾಳ್ ಮಿಸ್ಸಿಂಗ್ : ಶುರುವಾಯ್ತು ಕಾಂಗ್ರೆಸ್ ಪೋಸ್ಟರ್ ಅಭಿಯಾನ
ಐದು ಲಕ್ಷ ಬಾಂಡ್, ಎರಡು ಶ್ಯೂರಿಟಿ ಮೇಲೆ ವಿರೂಪಾಕ್ಷಪ್ಪಗೆ ಜಾಮೀನು ನೀಡಲಾಗಿದೆ. ಅಲ್ಲದೆ, 48 ಗಂಟೆಗಳಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ. ಶಾಸಕ ವಿರೂಪಾಕ್ಷಪ್ಪ ವಿರುದ್ಧ ಎಫ್ ಐಆರ್ ನಲ್ಲಿ ಯಾವುದೇ ಆರೋಪಗಳಿಲ್ಲ ಎಂದು ಮಾಡಾಳ್ ಪರ ಹಿರಿಯ ವಕೀಲ ಕೆ.ಸುಮನ್ ವಾದ ಮಂಡಿಸಿದ್ದಾರೆ.
6 ದಿನಗಳಿಂದ ಅಜ್ಞಾನ ಸ್ಥಳ
ಲೋಕಾಯುಕ್ತ ದಾಳಿ ಹಿನ್ನೆಲೆ ಕಳೆದ 6 ದಿನಗಳಿಂದ ಕಣ್ಮರೆಯಾಗಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಅಜ್ಞಾತ ಸ್ಥಳದಲ್ಲಿದ್ದರು. ಮಧ್ಯಂತರ ಜಾಮೀನು ಸಿಗುತ್ತಿದ್ದಂತೆ ಮನೆಗೆ ಆಗಮಿಸಿದ್ದಾರೆ. ಚನ್ನಗಿರಿಯ ಚನ್ನಕೇಶವಪುರದ ನಿವಾಸಕ್ಕೆ ಆಗಮಿಸುತ್ತಿದ್ದಂತೆಯೇ ಕಾರ್ಯಕರ್ತರು, ಬೆಂಬಲಿಗರು ಅದ್ಧೂರಿ ಸ್ವಾಗತ ಕೋರಿದ್ದಾರೆ.