ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಭರ್ಜರಿ ತಾಲೀಮು ನಡೆಸುತ್ತಿವೆ. ಇದರ ಮಧ್ಯೆ ರಾಷ್ಟ್ರ ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮೊನ್ನೆಯಷ್ಟೇ ರಾಜ್ಯಕ್ಕೆ ಬಂದು ಹೋಗಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತೆ ಕರುನಾಡಿಗೆ ಗ್ರ್ಯಾಂಡ್ ಎಂಟ್ರಿ ಕೊಡಲಿದ್ದಾರೆ.
ಬಿಜೆಪಿ ಜನಸಂಕಲ್ಪ ಯಾತ್ರೆ ಮೂಲಕ ಜನರನ್ನ ತನ್ನತ್ತ ಸೆಳೆಯಲು ಮುಂದಾಗಿದೆ. ಮತ್ತೊಂದೆಡೆ ಹಲವು ಅಭಿವೃದ್ಧಿ ಕಾರ್ಯಕ್ರಮ ಹಾಗೂ ಯೋಜನೆಗಳ ಲೋಕಾರ್ಪಣೆ ಸಹ ನಡೆಯುತ್ತಿದಡೆ. ಸತ್ಯಸಾಯಿ ಲೋಕಸೇವಾ ಸಂಸ್ಥೆ 350 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಖಾಸಗಿ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.
ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಹುಟ್ಟೂರು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ ಸತ್ಯಸಾಯಿ ಲೋಕಸೇವಾ ಸಂಸ್ಥೆ ಇದೆ. ಸಂಸ್ಥೆಯ ಅಧೀನದಲ್ಲಿ ಪ್ರಾಥಮಿಕ ಪ್ರೌಢ ಹಾಗೂ ಉನ್ನತ ವಿದ್ಯಾಭ್ಯಾಸದ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ.
ಇದನ್ನೂ ಓದಿ : ಶುರುವಾಯ್ತು ‘ಮೈಸೂರು-ಬೆಂಗಳೂರು ದಶಪಥ’ ಹೆದ್ದಾರಿ ಕ್ರೆಡಿಟ್
350 ಬೆಡ್ಗಳ ವಿನೂತನ ಆಸ್ಪತ್ರೆ
ಪುಟ್ಟಪರ್ತಿಯ ಸತ್ಯ ಸಾಯಿ ಬಾಬಾರ ಅನುಯಾಯಿಗಳು, ಭಕ್ತರು ಸಂಸ್ಥೆಯನ್ನು ನಿರ್ವಹಿಸುತ್ತಿದ್ದು, ಶ್ರೀ ಮಧುಸೂದನ್ ಸಾಯಿ, ಸಾಯಿ ಬಾಬ ಪ್ರತಿನಿಧಿಯಾಗಿ ಸಂಸ್ಥೆಗಳನ್ನು ಮುನ್ನೇಡೆಸುತ್ತಿದ್ದಾರೆ. ಮುದ್ದೇನಹಳ್ಳಿಯ ಸತ್ಯಸಾಯಿ ಆಶ್ರಮ ಗ್ರಾಮದಲ್ಲಿ ಈಗಾಗಲೇ ಸಾರ್ವಜನಿಕರಿಗೆ 350 ಬೆಡ್ಗಳ ವಿನೂತನ ಆಸ್ಪತ್ರೆ ಕಾರ್ಯನಿರ್ವಹಣೆ ಮಾಡುತ್ತಿದೆ. ಪ್ರತಿದಿನ ಸಾವಿರಾರು ಜನ ರೋಗಿಗಳು ಆಸ್ಪತ್ರೆಗೆ ಭೇಟಿ ನೀಡಿ ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾರ್ಚ್ 24ಕ್ಕೆ ದಾವಣಗೆರೆಗೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ ರಾಜ್ಯಕ್ಕೆ ಬಂದರೆ ಸುನಾಮಿ ಶುರುವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.