ಬೆಂಗಳೂರು : ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಹಲವು ಸುಂದರ ಕ್ಷಣಗಳಿಗೆ ಸಾಕ್ಷಿಯಾಗಿದೆ.
ಹೌದು, ಆಸ್ಟ್ರೇಲಿಯಾ ಪ್ರಧಾನಿ ಅಂತೋನಿ ಅಲ್ಬೇನಿಸ್ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್ ಟೆಸ್ಟ್ ಪಂದ್ಯ ವೀಕ್ಷಿಸಲು ಕ್ರಿಡಾಂಗಣಕ್ಕೆ ಬಂದಿದ್ದಾರೆ. ಈ ವೇಳೆ ಅಂತೋನಿ ಅಲ್ಬೇನಿಸ್ ಅವರು ಪ್ರಧಾನಿ ಮೋದಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆ.
75 ವರ್ಷಗಳ ಸ್ನೇಹದ ನೆನಪು
ಪ್ರಧಾನಿ ಅಂತೋನಿ ಅಲ್ಬೇನಿಸ್ ಸೆಲ್ಫಿ ಕ್ಲಿಕ್ಕಿಸಿಕೊಂಡ ಫೋಟೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ, ಕ್ರಿಕೆಟ್ ಮೂಲಕ ಎರಡೂ ದೇಶಗಳ 75 ವರ್ಷಗಳ ಸ್ನೇಹವನ್ನು ಆಚರಿಸುತ್ತಿದ್ದೇವೆ ಎಂದು ಫೋಟೋದೊಂದಿಗೆ ಉಲ್ಲೇಖ ಮಾಡಿದ್ದಾರೆ.
ಮೋದಿ, ಅಂತೋನಿಗೆ ಸನ್ಮಾನ
ಟೆಸ್ಟ್ ಪಂದ್ಯ ವೀಕ್ಷಿಸಲು ಅಹಮದಾಬಾದ್ ಕ್ರೀಡಾಂಗಣಕ್ಕೆ (ಪ್ರಧಾನಿ ನರೇಂದ್ರ ಮೋದಿ ಸ್ಟೇಡಿಯಂ) ಬಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಂತೋನಿ ಅಲ್ಬನೀಸ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬಳಿಕ, ಬಿಸಿಸಿಐ ವತಿಯಿಂದ ಇಬ್ಬರನ್ನೂ ಸನ್ಮಾನಿಸಲಾಯಿತು.
ಇದನ್ನೂ ಓದಿ : ಆಕೆಯ ಬ್ಯಾಟ್ ನಲ್ಲಿ ಧೋನಿ ಹೆಸರು, ಅದ್ಭುತ ಪ್ರದರ್ಶನ
ಸ್ಟೇಡಿಯಂನಲ್ಲಿ ಮೋದಿ-ಅಂತೋನಿ ರೌಂಡ್ಸ್
ಮೈದಾನಕ್ಕೆ ಆಗಮಿಸಿದ ನಂತರ ಟಾಸ್ ಮೊದಲು ಪ್ರಧಾನಿ ಮೋದಿ ಹಾಗೂ ಅಂತೋನಿ ಅಲ್ಬೇನಿಸ್ ಸ್ಟೇಡಿಯಂನಲ್ಲಿ ರೌಂಡ್ಸ್ ಹಾಕಿ ಪ್ರೇಕ್ಷಕರತ್ತ ಕೈ ಬೀಸಿದ್ದಾರೆ. ಆಸ್ಟ್ರೇಲಿಯಾ ಪ್ರಧಾನಿ ಅಂತೋನಿ ಅಲ್ಬೇನಿಸ್ಅವರು ಪ್ರಧಾನಿ ಮೋದಿ ಜೊತೆಗೆ ಸ್ವಲ್ಪ ಸಮಯ ವೀಕ್ಷಕ ವಿವರಣೆ ನೀಡಲಿದ್ದಾರೆ ಎನ್ನಲಾಗಿದೆ.
ಭಾರತ ಮತ್ತು ಆಸ್ಟ್ರೇಲಿಯ ನಡುವಣ ಬಾರ್ಡರ್ ಗವಾಸ್ಕರ್ ಟ್ರೋಫಿಯ ನಾಲ್ಕನೇ ಹಾಗೂ ಅಂತಿಮ ಪಂದ್ಯ ಅಹಮದಾಬಾದ್ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, 4 ವಿಕೆಟ್ ಕಳೆದುಕೊಂಡು 248 ರನ್ ಕಲೆಹಾಕಿದೆ. ಭಾರತದ ಪರ ಮೊಹಮ್ಮದ್ ಶಮಿ 2 ವಿಕೆಟ್, ಆರ್. ಅಶ್ವಿನ್ ಹಾಗೂ ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದಿದ್ದಾರೆ.