Tuesday, April 23, 2024

IND vs AUS : ಪ್ರೇಕ್ಷಕರತ್ತ ಕೈಬೀಸಿದ ಪ್ರಧಾನಿ ಮೋದಿ, ಅಲ್ಬೇನೀಸ್

ಬೆಂಗಳೂರು : ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ನಾಲ್ಕನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ಇಂದು ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಆಗಮಿಸಿದ್ದಾರೆ.

ಅಹಮದಾಬಾದ್ ಕ್ರೀಡಾಂಗಣದಲ್ಲಿ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅಂತೋನಿ ಅಲ್ಬೇನಿಸ್ ಆಗಮಿಸಿದ್ದಾರೆ. ಇದರಿಂದಾಗಿ ಕ್ರೀಡಾಂಗಣಕ್ಕೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮೈದಾನಕ್ಕೆ ಆಗಮಿಸಿದ ನಂತರ ಟಾಸ್ ಗೂ ಮುನ್ನ ಪ್ರಧಾನಿ ಮೋದಿ ಹಾಗೂ ಅಂತೋನಿ ಅಲ್ಬೇನಿಸ್ ಸ್ಟೇಡಿಯಂನಲ್ಲಿ ರೌಂಡ್ಸ್ ಹಾಕಿ ಪ್ರೇಕ್ಷಕರತ್ತ ಕೈ ಬೀಸಿದ್ದಾರೆ. ಆಸ್ಟ್ರೇಲಿಯಾ ಪ್ರಧಾನಿ ಅಂತೋನಿ ಅಲ್ಬೇನಿಸ್ಅವರು ಪ್ರಧಾನಿ ಮೋದಿ ಜೊತೆಗೆ ಸ್ವಲ್ಪ ಸಮಯ ವೀಕ್ಷಕ ವಿವರಣೆ ನೀಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಗುಡ್ ನ್ಯೂಸ್ : ಹೆಣ್ಣು ಮಗುವಿಗೆ ತಂದೆಯಾದ ಉಮೇಶ್ ಯಾದವ್

ಟಾಸ್ ಗೆದ್ದ ಸ್ಮಿತ್ ಬ್ಯಾಟಿಂಗ್ ಆಯ್ಕೆ

ಸುಮಾರು 1.10 ಲಕ್ಷ ಜನರು ಕುಳಿತು ಕೊಳ್ಳಬಹುದಾದ ಪ್ರೇಕ್ಷಕರ ಗ್ಯಾಲರಿಗಳಿರುವ ಕ್ರೀಡಾಂಗಣ ಇದಾಗಿದೆ. ಪಂದ್ಯದ ಮೊದಲ ದಿನ ಒಂದು ಲಕ್ಷ ಜನರು ಹಾಜರಾಗುವ ನಿರೀಕ್ಷೆ ಇದೆ. ಇನ್ನೂ, ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಆಸಿಸ್‌ ನಾಯಕ ಸ್ಟೀವ್ ಸ್ಮಿತ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಮೊಹಮ್ಮದ್ ಶಮಿ ಕಮ್ ಬ್ಯಾಕ್

ಆತಿಥೇಯ ಭಾರತವು ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ಬೌಲರ್ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ನೀಡಿದೆ. ಅವರ ಸ್ಥಾನಕ್ಕೆ ಮೊಹಮ್ಮದ್ ಶಮಿ ಬಂದಿದ್ದಾರೆ. ಬಾರ್ಡರ್‌–ಗಾವಸ್ಕರ್ ಟ್ರೋಫಿ ವಿಜಯ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶದ ಗುರಿಗಳು ಈಡೇರಬೇಕಾದರೆ ಟೀಂ ಇಂಡಿಯಾ ಈ ಟೆಸ್ಟ್‌ ಪಂದ್ಯವನ್ನು ಗೆಲ್ಲಲೇಬೇಕಾಗಿದೆ.

RELATED ARTICLES

Related Articles

TRENDING ARTICLES