ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಫೀವರ್ ಹೆಚ್ಚಾಗುತ್ತಿದೆ. ಇತ್ತ ಎಲ್ಲ ಪಕ್ಷಗಳಲ್ಲೂ ಟಿಕೆಟ್ ಫೈಟ್ ನಡೆಯುತ್ತಿದೆ. ಹಾಲಿ ಶಾಸಕರಿಗೆ ಬಹುತೇಕ ಟಿಕೆಟ್ ಕನ್ಫರ್ಮ್ ಎನ್ನಲಾಗುತ್ತಿದೆ. ಆದ್ರೆ, ಸಿಎಂ ಬಸವರಾಜ್ ಬೊಮ್ಮಾಯಿ ಬಿಜೆಪಿಯ ಹಾಲಿ ಶಾಸಕರಿಗೆ ಶಾಕ್ ಕೊಟ್ಟಿದ್ದಾರೆ.
ವಿಜಯಪುರದ ಚಿಕ್ಕಗಲಗಲಿಯಲ್ಲಿ ಮಾತನಾಡಿದ ಅವರು, ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ಕೊಟ್ಟ ಉದಾಹರಣೆ ಇಲ್ಲ ಎಂದು ಹೇಳುವ ಮೂಲಕ ಕೆಲವು ಹಾಲಿ ಶಾಸಕರಿಗೆ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಒಂದು ಎಲೆಕ್ಷನ್ ಗಿಂತ ಇನ್ನೊಂದು ಎಲೆಕ್ಷನ್ ಭಿನ್ನವಾಗಿರುವುದರಿಂದ ಎಲ್ಲರಿಗೂ ನೂರಕ್ಕೆ ನೂರು ಟಿಕೆಟ್ ಕೊಟ್ಟ ಉದಾಹರಣೆಗಳಿಲ್ಲ. ಸಮೀಕ್ಷೆ, ಶಾಸಕರ ಕಾರ್ಯವೈಖರಿ ಸೇರಿ ಎಲ್ಲಾ ಮಾನದಂಡಗಳನ್ನು ನೋಡಿಕೊಂಡು ಟಿಕೆಟ್ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ : ಸುಮಲತಾ ಬಿಜೆಪಿ ಸೇರ್ಪಡೆ ಬಗ್ಗೆ ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ
ಬಿಎಸ್ ವೈ ಹೇಳಿಕೆಗೆ ಸಿಎಂ ಏನಂದ್ರು?
ಬಿಜೆಪಿ ಹಾಲಿ ಶಾಸಕರಿಗೆ ಟಿಕೆಟ್ ತಪ್ಪಲಿದೆ ಎನ್ನುವ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಬಿ.ಎಸ್ ಯಡಿಯೂರಪ್ಪನವರು ಸಂಸದೀಯ ಮಂಡಳಿ ಸದಸ್ಯರು, ಅವರಿಗೆ ಮಾಹಿತಿ ಇರಬಹುದು. 70 ವಯಸ್ಸು ದಾಟಿದವರಿಗೆ ಟೀಕೆಟ್ ನೀಡಬೇಕೇ? ಬೇಡವೇ? ಎನ್ನುವ ವಿಚಾರ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಎಲ್ಲರಿಗೂ ಟಿಕೆಟ್ ಸಿಗಲು ಸಾಧ್ಯವಿಲ್ಲ
ಪ್ರತಿಯೊಂದು ಕ್ಷೇತ್ರದ ಕುರಿತು ಸಂಸದೀಯ ಮಂಡಳಿಯಲ್ಲಿ ಚರ್ಚೆ ನಡೆಯುತ್ತಿದೆ. ಆದರೆ, ನೂರಕ್ಕೆ ನೂರರಷ್ಟು ಎಲ್ಲರಿಗೂ ಟಿಕೆಟ್ ಸಿಗುತ್ತದೆ ಅಂತ ಹೇಳಲು ಸಾಧ್ಯವಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.