ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ(2023) ಬಿಜೆಪಿ ಹೈಕಮಾಂಡ್ ನಿಂದ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ.
ಹೌದು, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸೇರಿದಂತೆ 14 ಮಂದಿ ಸದಸ್ಯರು ಹಿರಿಯಾಗಿದ್ದಾರೆ ಎನ್ನುವುದು ವಿಶೇಷ.
ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇಮಕವಾಗಿದ್ದರೆ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ.
ವಿಜಯೇಂದ್ರಗೆ ಸ್ಥಾನ
25 ಜನರ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಸ್ಥಾನ ನೀಡಲಾಗಿದೆ.
ಸಚಿವ ಸೋಮಣ್ಣ ಔಟ್
ಬಿಜೆಪಿ ಹೈಕಮಾಂಡ್ ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಸಮಿತಿಯಲ್ಲಿ ಸ್ಥಾನ ನೀಡದಿರುವುದು ಸೋಮಣ್ಣ ಹಾಗೂ ಬೆಂಬಲಿಗರಿಗೆ ಶಾಕ್ ನೀಡಿದಂತಾಗಿದೆ. ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆ ಎಂದು ಹಬ್ಬಿರುವ ಸುದ್ದಿ ಹಬ್ಬಿರುವ ಬೆನ್ನಲ್ಲೇ ಈ ಸುದ್ದಿ ಅದಕ್ಕೆ ಪುಷ್ಠಿ ನೀಡುವಂತಿದೆ. ಒಂದು ವೇಳೆ ಸೋಮಣ್ಣ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುವ ಸೂಚನೆ ಬಿಜೆಪಿ ನಾಯಕರಿಗೆ ಸಿಕ್ಕಿದೆಯೇ ಎಂಬ ವದಂತಿ ಹಬ್ಬಿದೆ.
ಈ ಸಮಿತಿಯು ಪ್ರಚಾರ, ಸಮಾವೇಶಗಳು ಸೇರಿದಂತೆ ಹಲವು ವಿಚಾರಗಳನ್ನು ನಿರ್ವಹಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ.