ಬೆಂಗಳೂರು : ದೇಶದಲ್ಲಿ ಕೋವಿಡ್ ರೂಪಾಂತರಿ ತಳಿ ಎಂದೇ ಹೇಳಲಾಗುತ್ತಿರುವ H3N2 ಸೋಂಕಿಗೆ ಮೊದಲ ಬಲಿಯಾಗಿದೆ. ಇದು ರಾಜ್ಯದ ಜನರಲ್ಲಿ ಆತಂಕ ಮೂಡಿಸಿದೆ.
ಹೌದು, ಅದರಲ್ಲೂ ಮೊದಲ ಬಲಿ ರಾಜ್ಯದಲ್ಲೇ ಎನ್ನುವುದು ಜನರಲ್ಲಿ ಭಯವನ್ನುಂಟು ಮಾಡಿದೆ. H3N2 ಸೋಂಕಿನಿಂದ ಬಳಲುತ್ತಿದ್ದ ಹಾಸನ ಮೂಲದ 85 ವರ್ಷ ವಯಸ್ಸಿನ ವೃದ್ಧ ಸಾವನ್ನಪ್ಪಿರುವುದು ವರದಿಯಾಗಿದೆ.
ಸೋಂಕಿತ ವ್ಯಕ್ತಿಯು ಚಳಿ, ಜ್ವರ ಮತ್ತು ಗಂಟಲು ನೋವಿನಿಂದ ಬಳಲುತ್ತಿದ್ದನು. ಹಾಸನದಲ್ಲಿ ಆರು ಜನರಿಗೆ H3N2 ಸೋಂಕು ತಗುಲಿದೆ. ಹಲವು ಜಿಲ್ಲೆಗಳಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : H3N2 : ರಾಜ್ಯಕ್ಕೆ ಹೊಸ ಗೈಡ್ ಲೈನ್ಸ್ : ಇವರಿಗೆ ಮಾತ್ರ ಅನ್ವಯ
ಸುತ್ತಮುತ್ತಲ ಗ್ರಾಮದಲ್ಲಿ ಆರೋಗ್ಯ ತಪಾಸಣೆ
ಮೃತ ವ್ಯಕ್ತಿಯ ಗ್ರಾಮದ ಸುತ್ತಮುತ್ತಲ ಹಳ್ಳಿಯಲ್ಲಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತ ಜನರ ಹಾಗೂ ವೃದ್ಧರ ಆರೋಗ್ಯ ತಪಾಸಣೆ ನಡೆಸುತ್ತಿದೆ. ಗ್ರಾಮಸ್ಥರ ಗಂಟಲು ದ್ರವವನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.