Monday, December 23, 2024

ಸುಮಲತಾ ಮಹತ್ವದ ಘೋಷಣೆ : ಮೋದಿ ನೇತೃತ್ವದ ಬಿಜೆಪಿಗೆ ನನ್ನ ಸಂಪೂರ್ಣ ಬೆಂಬಲ

ಬೆಂಗಳೂರು : ತಮ್ಮ ಮುಂದಿನ ರಾಜಕೀಯ ನಡೆಯನ್ನು ಬಹಿರಂಗಪಡಿಸಲು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದ ಸಂಸದೆ ಸುಮಲತಾ ಅಂಬರೀಶ್ ಮಹತ್ವದ ಘೋಷಣೆ ಹೊರಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿಗೆ ನನ್ನ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ. ಆದರೆ, ಅವರು ಬಿಜೆಪಿ ಪಕ್ಷ ಸೇರ್ಪಡೆ ಬಗ್ಗೆ ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ.

ಮೋದಿ ನಾಯಕತ್ವದ ಬಗ್ಗೆ ನಂಬಿಕೆ

ಅಭಿವೃದ್ಧಿ ಹಾಗೂ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಬಗ್ಗೆ ನಂಬಿಕೆ ಇಟ್ಟುಕೊಂಡು ಈ ನಿರ್ಧಾರ ಮಾಡಿದ್ದೇನೆ. ಈ ಕಾರಣಕ್ಕಾಗಿ ನಾನು ಬಿಜೆಪಿಗೆ ನಾನು ಬೆಂಬಲಿಸುವುದಾಗಿ ಸುಮಲತಾ ಅಂಬರೀಶ್ ಬಹಿರಂಗವಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ : ಆ.. ಕಹಿ ಘಟನೆ ನೆನೆದು ಸುಮಲತಾ ಕಣ್ಣೀರು!

ಕಳೆದ ವಿಧಾನಸಭಾ ಚುನಾವಣೆ ವೇಳೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಆ ವೇಳೆ ಬಿಜೆಪಿ ಅಭ್ಯರ್ಥಿ ಹಾಕದೆ ಬೆಂಬಲ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಹೀಗಾಗಿಯೇ, ಸುಮಲತಾ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ.

ಒಟ್ಟಾರೆ, ಸುಮಲತಾ ಬಿಜೆಪಿ ಸೇರುತ್ತಾರೆ. ಇಲ್ಲ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಚರ್ಚೆ, ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಜೈ ಎಂದ ಸುಮಲತಾ ಅಂಬರೀಶ್, ಬಿಜೆಪಿಗೆ ಅಧಿಕೃತ ಬಾಹ್ಯ ಬೆಂಬಲ ಘೋಷಿಸಿ, ಜಾಣ್ಮೆಯ ನಡೆ ಮುಂದುವರಿಸಿದ್ದಾರೆ.

RELATED ARTICLES

Related Articles

TRENDING ARTICLES