Wednesday, January 22, 2025

ನಾಳೆ ರಾಜ್ಯಕ್ಕೆ ನಮ್ಮ ಪ್ರಧಾನಿ ಬರ್ತಿದ್ದಾರೆ: ಶೋಭಾ ಕರಂದ್ಲಾಜೆ

ಬೆಂಗಳೂರು : ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆ ಮಾಡಲು ನಾಳೆ (ಮಾರ್ಚ್ 12) ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟನೆ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಂಗಳೂರಿನ ಗೌರವ ಮೈಸೂರಿಗೆ ಸಿಗುತ್ತಿದೆ. ಹೆದ್ದಾರಿ ಯೋಜನೆ ದಶಕಗಳ ಕನಸು ಎಂದು ಹೇಳಿದ್ದಾರೆ.

ಎಚ್.ಡಿ ದೇವೇಗೌಡರು ಪ್ರಧಾನಿಯಾಗಿದ್ದಾಗ ನೈಸ್ ಕಂಪನಿ ತಂದರು. ನೈಸ್ ಕಂಪನಿ‌ ಬೆಂಗಳೂರಿಗೆ ಸೀಮಿತವಾಯಿತು. ಮೈಸೂರಿಗೆ ಹೆಚ್ಚು ಒತ್ತು ನೀಡಬೇಕೆಂದು ಹೇಳಿದ್ದೆವು. ಇದರ ಫಲವಾಗಿ ಇಂದು ಮೈಸೂರು -ಬೆಂಗಳೂರು ದಶಪಥ ಹೆದ್ದಾರಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ‘ಕಿಲ್ಲರ್ ಹೈವೇ’!

ಪ್ರಧಾನಿ ಅಧ್ಯಕ್ಷತೆಯಲ್ಲೇ ಅನುಮೋದನೆ

ಪ್ರಧಾನಿ ನರೇಂದ್ರ ಮೋದಿ ಅವರು 2018ರಲ್ಲಿ ದಶಪಥ ಹೆದ್ದಾರಿ (ರಸ್ತೆ) ಘೋಷಿಸಿದ್ದರು. ಕ್ಯಾಬಿನೆಟ್ ಸಬ್ ಕಮಿಟಿ ಅನುಮೋದನೆ ನೀಡಿತ್ತು. ಪ್ರಧಾನಿ ಅಧ್ಯಕ್ಷತೆಯಲ್ಲೇ ಅನುಮೋದನೆ ಸಿಕ್ಕಿತ್ತು. ಡಿ.ವಿ ಸದಾನಂದ ಗೌಡರು ಹೆದ್ದಾರಿಗೆ ಶಿಲಾನ್ಯಾಸವನ್ನು ಮಾಡಿದ್ದರು ಎಂದು ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದಾರೆ.

ಅವೈಜ್ಞಾನಿಕವಾಗಿ ಹೆದ್ದಾರಿ?

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಲೋಕಾರ್ಪಣೆಗೊಳಿಸಲಿದ್ದಾರೆ. ಲೋಕಾರ್ಪಣೆ ದಿನ ಸಮೀಪಿಸುತ್ತಿದ್ದಂತೆಯೇ ಒಂದೆಡೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಕ್ರೆಡಿಟ್ ವಾರ್ ನಡೆಯುತ್ತಿದೆ. ಜೊತೆಗೆ, ರಸ್ತೆ ನಿರ್ಮಾಣದ ಬಗ್ಗೆ ಆರೋಪಗಳೂ ಕೇಳಿಬಂದಿವೆ. ಅವೈಜ್ಞಾನಿಕವಾಗಿ ಹೆದ್ದಾರಿ ನಿರ್ಮಾಣ ಮಾಡಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

RELATED ARTICLES

Related Articles

TRENDING ARTICLES