Wednesday, January 22, 2025

ಕಾಂಗ್ರೆಸ್ ನಾಯಕ ಆರ್. ಧ್ರುವನಾರಾಯಣ ಇನ್ನಿಲ್ಲ

ಬೆಂಗಳೂರು : ಮಾಜಿ ಸಂಸದರು ಹಾಗೂ ಹಾಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನಿಧನ ಹೊಂದಿದ್ದಾರೆ.

ಹೃದಯಾಘಾತದಿಂದ ಅವರು ಮೈಸೂರಿನಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.

1983ರಲ್ಲಿ ಪಕ್ಷದ ಕಾರ್ಯಕರ್ತನಾಗಿ ಕಾಂಗ್ರೆಸ್ ಸೇರಿದ್ದ ಅವರು, ಕೊಳ್ಳೇಗಾಲ, ಸಂತೆಮರದಿಂದ ಎರಡು ಬಾರಿ ಶಾಸಕರಾಗಿದ್ದ ಅವರು, 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

2019ರ ಲೋಕಸಭೆ ಚುನಾವಣೆಯಲ್ಲಿ ಅವರು ಶ್ರೀನಿವಾಸ ಪ್ರಸಾದ್ ವಿರುದ್ಧ 12,716 ಮತಗಳಿಂದ ಸೋತರು. ಅವರ ನಿಧನಕ್ಕೆ ಕಾಂಗ್ರೆಸ್ ನಾಯಕರು ಸೇರಿದಂತೆ ರಾಜಕೀಯ ಗಣ್ಯರುಸಂತಾಪ ಸೂಚಿಸಿದ್ದಾರೆ.

ಸಿಎಂ ಬೊಮ್ಮಾಯಿ ಟ್ವೀಟ್

‘ಮಾಜಿ ಸಂಸದರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಶ್ರೀ ಧ್ರುವನಾರಾಯಣ್ ಅವರು ನಿಧನರಾದ ವಿಷಯ ಅತ್ಯಂತ ಬೇಸರ ಉಂಟುಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇನೆ ಹಾಗೂ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ’ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

RELATED ARTICLES

Related Articles

TRENDING ARTICLES