Sunday, December 22, 2024

ಧ್ರುವನಾರಾಯಣ ‘ನಗುಮುಖದ ಗೆಳೆಯ’ : ಸುರ್ಜೇವಾಲಾ ಸಂತಾಪ

ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದರಾದ ಆರ್. ಧ್ರುವನಾರಾಯಣ ನಿಧನಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಸಂತಾಪ ಸೂಚಿಸಿದ್ದಾರೆ.

‘ನಗುಮುಖದ ಗೆಳೆಯ, ನಮ್ಮ ನಾಯಕ ಮತ್ತು ಕಾಂಗ್ರೆಸ್‌ನ ಅತ್ಯಂತ ಸಮರ್ಪಿತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಧ್ರುವನಾರಾಯಣ ಅವರ ನಿಧನ ಸರಿಪಡಿಸಲಾಗದ ನಷ್ಟವನ್ನು ಮಾಡಿದೆ. ಇದನ್ನು ವಿವರಿಸಲು ಯಾವುದೇ ಪದಗಳಿಲ್ಲ’ ಎಂದು ರಣದೀಪ್ ಸಂತಾಪವನ್ನು ಸೂಚಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ

‘ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರು,‌ ಮಾಜಿ ಸಂಸದರು, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಶ್ರೀಯುತ ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ. ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೊರಕಲಿ’ ಎಂದು ಕೆಪಿಸಿಸಿ ಸಂತಾಪ ಸೂಚಿಸಿದೆ.

ಸರಳ ಸಜ್ಜನಿಕೆಯ ನೇತಾರ

ಆರ್. ಧ್ರುವನಾರಾಯಣ ಅವರ ಅಗಲಿಕೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ‘ರಾಜಕಾರಣದಲ್ಲಿ ಯಾರು ಶಾಶ್ವತ ಮಿತ್ರರೂ, ಶತ್ರುವೂ ಅಲ್ಲ. ಸಂಸದರಾಗಿ, ಶಾಸಕರಾಗಿ ಜನರೊಂದಿಗೆ ಇದ್ರು. ತುಂಬಾ ಸರಳ ಸಜ್ಜನಿಕೆಯ ನೇತಾರ. ಅವರ ಅಕಾಲಿಕ ಹಗಲಿಕೆಗೆ ಬಿಜೆಪಿ ರಾಜ್ಯ ಘಟಕ ಸಂತಾಪ ಸೂಚಿಸುತ್ತದೆ’ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES