Wednesday, January 22, 2025

ಹೀಗಿತ್ತು ಧ್ರುವನಾರಾಯಣ ರಾಜಕೀಯ ಹಾದಿ..!

ಬೆಂಗಳೂರು : ಮಾಜಿ ಸಂಸದ ಹಾಗೂ ಹಾಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ಧ್ರುವನಾರಾಯಣ ಓರ್ವ ಸಾಮಾನ್ಯ ಕಾರ್ಯಕರ್ತರಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದರು. 2004ರಲ್ಲಿ ಸಂತೆಮರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಅವರು, ಕೇವಲ 1 ಮತದಿಂದ ಗೆಲುವು ಪಡೆದು ದಾಖಲೆ ಸೃಷ್ಟಿಸಿದ್ದರು.

2018ರಲ್ಲಿ ಶ್ರೀನಿವಾಸ ಪ್ರಸಾದ್ ಅವರ ವಿರುದ್ಧ ಸ್ಪರ್ಧಿಸಿದ್ದ ಅವರು ಸೋಲಿನ ಬಳಿಕವೂ ಸಕ್ರಿಯರಾಗಿದ್ದರು. ಸಂಸದರಾಗಿದ್ದ ವೇಳೆ ಅನುದಾನ ಬಳಕೆ ವಿಚಾರದಲ್ಲಿ ಉತ್ತಮ ಹೆಸರು ಪಡೆದುಕೊಂಡಿದ್ದರು.

ಇದನ್ನೂ ಓದಿ : ತೀವ್ರ ರಕ್ತಸ್ರಾವದಿಂದ ಧ್ರುವನಾರಾಯಣ ಮೃತ

ಧ್ರುವನಾರಾಯಣ ರಾಜಕೀಯ ಜರ್ನಿ

1961ರ ಜುಲೈ 31ರಂದು ಚಾಮರಾಜನಗರ ಜಿಲ್ಲೆಯ ಹಗ್ಗವಾಡಿ ಗ್ರಾಮದಲ್ಲಿ ಜನನ.

  • ಧ್ರುವನಾರಾಯಣ್ ಕೃಷಿ ಪದವೀಧರರು
  • 1983 ರಲ್ಲಿ ಕಾಂಗ್ರೆಸ್ ಸೇರ್ಪಡೆ
  • 1984 ಎನ್‌ಎಸ್‌ಯುಐ ಅಧ್ಯಕ್ಷರಾಗಿ ಆಯ್ಕೆ
  • 1986ರಲ್ಲಿ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಆಗಿ ಸೇವೆ
  • 1999ರಲ್ಲಿ ಮೊದಲ ಬಾರಿಗೆ ಸಂತೆಮರಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು
  • 2004ರಲ್ಲಿ ಮತ್ತೆ ವಿಧಾನಸಭೆಗೆ ಸ್ಪರ್ಧಿಸಿ, ಒಂದು ಮತದಿಂದ ಗೆಲುವು
  • 2008ರಲ್ಲಿ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಗೆಲುವು
  • 2009 ಮತ್ತು 2014 ರಲ್ಲಿ ಲೋಕಸಭೆಗೆ ಕಾಂಗ್ರೆಸ್ ಪಕ್ಷದಿಂದ ಆಯ್ಕೆ
  • ಕಳೆದ ಎರಡು ವರ್ಷಗಳಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸಕ್ರಿಯ
  • 2023ರ ವಿಧಾನಸಭಾ ಚುನಾವಣೆಗೆ ನಂಜನಗೂಡು ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿ

ಹೃದಯಾಘಾತದಿಂದ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ (62) ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸಕ್ರಿಯರಾಗಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದರು.

RELATED ARTICLES

Related Articles

TRENDING ARTICLES