Monday, December 23, 2024

ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಪಡೆಯುತ್ತೆ : ಬಿಜೆಪಿ ಸಚಿವರ ವಿಶ್ವಾಸ

ಬೆಂಗಳೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಪಕ್ಷ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೃಷ್ಣಾನಂದನಗರ ವೃತ್ತದ ಬಳಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ. ವಿಜಯ ಸಂಕಲ್ಪ ಯಾತ್ರೆಯಿಂದ ನಮ್ಮ ಪಕ್ಷಕ್ಕೆ ಹೆಚ್ಚಿನ ಬೆಂಬಲ ದೊರೆತಿದೆ ಎಂದು ಹೇಳಿದ್ದಾರೆ.

ಕಳೆದ ಬಾರಿ ಚುನಾವಣೆಗಿಂತ ಹೆಚ್ಚಿನ ಅಂತರದಲ್ಲಿ ಈ ಬಾರಿ ಬಿಜೆಪಿ ಪಕ್ಷವು ಗೆಲುವು ಸಾಧಿಸಲಿದೆ. 2013 ರಿಂದ ಈವರೆಗೆ ತನಕ ಬಿಜೆಪಿ ಪಕ್ಷದ ಅಭಿವೃದ್ಧಿ ಕಾರ್ಯಗಳು ಜನಸಾಮಾನ್ಯರಿಗೆ ತಿಳಿದಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.

ಎಲ್ಲ ರೀತಿಯ ಅಭಿವೃದ್ಧಿ

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಶಾಲೆ, ರಸ್ತೆ, ಉದ್ಯಾನವನ ಸೇರಿದಂತೆ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನರು ಉತ್ತಮ ಜೀವನ ನಡೆಸಲು ಬೇಕಾದಂತಹ ಎಲ್ಲಾ ಮೂಲ ಸೌಕರ್ಯ ಒದಗಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಒಬಿಸಿ ಅಧ್ಯಕ್ಷರಾದ ನರೇಂದ್ರ ಬಾಬು, ಮಾಜಿ ಉಪಮೇಯರ್ ಹರೀಶ್, ಹೇಮಲತಾ ಗೋಪಾಲಯ್ಯ,  ಬಿಜೆಪಿ ಉತ್ತರ ಘಟಕದ ಉಪಾಧ್ಯಕ್ಷ ಜಯರಾಮ್, ಶ್ರೀನಿವಾಸ್, ಮುಖಂಡರಾದ ರಾಜೇಂದ್ರ ಕುಮಾರ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES