Wednesday, January 22, 2025

ಬೆಂಗಳೂರು-ಮೈಸೂರು ರಸ್ತೆ ಕ್ರೆಡಿಟ್ ಯಾರಿಗೆ? : ಸಿಎಂ ಕೊಟ್ಟ ಉತ್ತರ ಏನು?

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು(ಭಾನುವಾರ) ಲೋಕಾರ್ಪಣೆಗೊಳಿಸಲಿದ್ದಾರೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಕ್ರೆಡಿಟ್ ವಾರ್ ನಡೆಯುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮೈಸೂರು ರಸ್ತೆ ಕ್ರೆಡಿಟ್ ಯಾರಿಗೆ ಎನ್ನುವುದನ್ನು ಜನರೇ ತೀರ್ಮಾನ ಮಾಡಲಿ ಎಂದು ಬೊಮ್ಮಾಯಿ‌ ಹೇಳಿದ್ದಾರೆ.

ಮೈಸೂರು ಹೈವೆ ಮೊದಲು ನಾಲ್ಕು ಪಥದ ರಸ್ತೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಾರಂಭವಾಯಿತು.  2004/2007 ರಲ್ಲಿ ಪ್ರಾರಂಭ ಆದ ಬಳಿಕ ಭಾರತ ಸರ್ಕಾರ ಇದನ್ನು ಅಂತರಾಷ್ಟ್ರೀಯ ಹೆದ್ದಾರಿ ಎಂದು 2014 ರಲ್ಲಿ ಘೋಷಣೆ ಮಾಡಿತು. ಘೋಷಣೆ ಮಾಡಿ 10-15 ವರ್ಷವಾದರೂ ಯುಪಿಎ ಸರ್ಕಾರ ಅಂತರರಾಷ್ಟ್ರೀಯ ಹೆದ್ದಾರಿ ಕೆಲಸವನ್ನು ಪೂರ್ಣ ಮಾಡಲಿಲ್ಲ. ಕೇವಲ ಘೋಷಣೆ ಆಗಿತ್ತು. 2014 ರಲ್ಲಿ ಘೋಷಣೆ ಆಗಿ, ಡಿಪಿಆರ್ ಆದ ಬಳಿಕ ಅಲೈನ್ಮೆಂಟ್ ಆಗಿದ್ದು 2015 ರಲ್ಲಿ ಎಂದು ತಿಳಿಸಿದ್ದಾರೆ.

2015ರಲ್ಲಿ ಎನ್ ಡಿಎ  ಸರ್ಕಾರವಿತ್ತು

2015ರಲ್ಲಿ ಎನ್ ಡಿಎ  ಸರ್ಕಾರವಿತ್ತು‌. ಬೆಂಗಳೂರು  ಮೈಸೂರು ಹೆದ್ದಾರಿ 2016 ರಲ್ಲಿ ಅಂತರಾಷ್ಟ್ರೀಯ ಹೆದ್ದಾರಿಯ ಅಥಾರಿಟಿ ಹ್ಯಾಂಡ್ ಓವರ್ ಆಯ್ತು‌. ಆಗ  ಎನ್‌ಡಿಎ ಸರ್ಕಾರವಿತ್ತು‌. ಅಮೇಲೆ ಟೆಂಡರ್ ಪ್ರೋಸೆಸ್ ಮಾಡಿ ಹಣ ಬಿಡುಗಡೆ ಮಾಡಲಾಗಿದ್ದು, 2023ರಲ್ಲಿ ಇದು ರಸ್ತೆ ಕೆಲಸ ಮುಗಿದಿದೆ ಎಂದು ಹೇಳಿದ್ದಾರೆ.

ಎನ್ ಡಿಎ ಅವಧಿಯಲ್ಲೇ ಈ ಯೋಜನೆ

ಸಂಪೂರ್ಣ ಕೆಲಸ ಎನ್ ಡಿಎ ಸರ್ಕಾರದ ಅವಧಿಯಲ್ಲೇ ಈ ಯೋಜನೆ ಆಗಿದೆ. ಪ್ರಧಾನಮಂತ್ರಿ ಮೋದಿಯವರ ನೇತೃತ್ವದಲ್ಲಿ ಈ ಯೋಜನೆಯಾಗಿದೆ. ಜನರಿಗೆ ಈ ಮಾಹಿತಿ ಕೊಡಬೇಕು ಅಂತ ನಾನು ಕೊಟ್ಟಿದ್ದೇನೆ ಎಂದು ಬೊಮ್ಮಾಯಿ‌ ತಿಳಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ‘ಕಿಲ್ಲರ್ ಹೈವೇ’!

ನೈಸ್ ರೋಡ್ ಸಹ ಬರಲಿಲ್ಲ

ಈ ಮಧ್ಯೆ ನೈಸ್ ರೋಡ್ ಮಾಡ್ತೀವಿ ಅಂತ ನಿಲ್ಲಿಸಿದರು. ನೈಸ್ ರೋಡ್ ಸಹ ಬರಲಿಲ್ಲ ಇದು ಆಗಲಿಲ್ಲ. ಆಗ ವಾಹನ ದಟ್ಟನೆ ಜಾಸ್ತಿ ಆಯ್ತು. ಸಮಸ್ಯೆ ಆಗುತ್ತದೆ ಎಂದಾಗ ನ್ಯಾಷನಲ್ ಹೈವೇ ನವರು ತಗೆದುಕೊಂಡು ಮೋದಿ ನೇತೃತ್ವದ ಸರ್ಕಾರ ಈ ಯೋಜನೆ ಮುಗಿಸಿದ್ದಾರೆ. ಯಾರಿಗೆ ಕ್ರೆಡಿಟ್ ಅನ್ನುವುದನ್ನು ಜನರ ತೀರ್ಮಾನ ಮಾಡಲಿ ಎಂದು ಹೇಳಿದ್ದಾರೆ.

ರಾಜ್ಯದ ಜನರಿಗೂ ಗೊತ್ತಾಗಿದೆ

ಪ್ರಧಾನಿ ಮೋದಿ ನೇತೃತ್ವದ ಸರ್ಕಾರವೇ ಹಣ ಬಿಡುಗಡೆ ಮಾಡಿ ಯೋಜನೆ ಮುಗಿಸಿದೆ. ಮೋದಿ ಸರ್ಕಾರವೇ ಈ ಯೋಜನೆ ಮಾಡಿದ್ದು ಅಂತ ಜನರಿಗೂ ಗೊತ್ತಾಗಿದೆ ಅಂತ ನಾನು ಭಾವಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES