Monday, December 23, 2024

ಮೈಸೂರಿಗೆ ಪ್ರಧಾನಿ ಮೋದಿ ಆಗಮನ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ವಿಶೇಷ ವಿಮಾನದಲ್ಲಿ ಅರಮನೆನಗರಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ನಾಯಕರು ಮೋದಿಯನ್ನು ಸ್ವಾಗತಿಸಿದರು.

ಮಂಡ್ಯ ಜಿಲ್ಲೆಯಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಮೋದಿ ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ತೆರಳಲಿದ್ದಾರೆ.

ಇದನ್ನೂ ಓದಿ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ‘ಕಿಲ್ಲರ್ ಹೈವೇ’!

ಪ್ರಧಾನಿ ಮೋದಿ ಇಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಉದ್ಘಾಟನೆ, ಮಂಡ್ಯದಲ್ಲಿ ರೋಡ್ ಶೋ, ಮದ್ದೂರಿನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಷಣ ಮಾಡಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿಯವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಮಧ್ಯಾಹ್ನ 3.15ಕ್ಕೆ ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

RELATED ARTICLES

Related Articles

TRENDING ARTICLES