ಬೆಂಗಳೂರು : ಪ್ರಧಾನ ನರೇಂದ್ರ ಮೋದಿ ಚಾಲನೆ ಕೊಟ್ಟ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಒಂದಲ್ಲಾ ಒಂದು ಕಂಟಕ ಎದುರಾಗುತ್ತಲೇ ಇದೆ. ಪ್ರಾರಂಭದಲ್ಲೇ ರೈಲಿಗೆ ಪ್ರಾಣಿಗಳು ಗುದ್ದಿದ ಘಟನೆ ನಡೆದಿತ್ತು. ಇದೀಗ, ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆದಿದೆ.
ಹೌದು, ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆದಿದೆ. ಇದರಲ್ಲಿ ಹೈಸ್ಪೀಡ್ ರೈಲಿನ ಕೋಚ್‌ನ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ ಎಂದು ಪೂರ್ವ ರೈಲ್ವೆ ಹೇಳಿಕೆಯಲ್ಲಿ ತಿಳಿಸಿದೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಫರಕ್ಕಾ ಬಳಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸಿಪಿಆರ್ ಓ, ಪೂರ್ವ ರೈಲ್ವೆ ಸಿಯಾಡ್ ಕೌಶಿಕ್ ಮಿತ್ರ ಮಾತನಾಡಿ, ಇದು ಅತ್ಯಂತ ದುರದೃಷ್ಟಕರ ಘಟನೆ, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಎರಡು ಕೋಚ್‌ಗಳ ಮೇಲೆ ಕಲ್ಲು
ಹೌರಾ ನಿಲ್ದಾಣದ ಬಳಿ ರೈಲಿಗೆ ಕಲ್ಲು ತೂರಾಟ ನಡೆಸಿದ್ದರಿಂದ ಹೈಸ್ಪೀಡ್ ರೈಲಿನ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ. ಜನವರಿಯಲ್ಲಿ, ರೈಲ್ವೆ ಸಂರಕ್ಷಣಾ ಪಡೆ ಡಾರ್ಜಿಲಿಂಗ್ ಜಿಲ್ಲೆಯ ಫನ್‌ಸಿಡೆವಾ ಪ್ರದೇಶದ ಬಳಿ ಎರಡು ಕೋಚ್‌ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಇದರಿಂದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಎರಡು ಕಿಟಕಿ ಗಾಜುಗಳು ಹಾನಿಗೊಳಗಾಗಿತ್ತು ಎಂದು ಹೇಳಿದೆ.