Sunday, December 22, 2024

ಸಿಎಂ ಬೊಮ್ಮಾಯಿ ಮಹತ್ವದ ಘೋಷಣೆ

ಬೆಂಗಳೂರು : ಹಂಪಿ ಸರ್ಕ್ಯೂಟ್ ನಲ್ಲಿ  ಲಕ್ಕುಂಡಿಯನ್ನು ಸೇರಿಸಲು ಈಗಾಗಲೇ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಲಕ್ಕುಂಡಿ ಕ್ಷೇತ್ರವು ಹಂಪಿ ಸರ್ಕೀಟ್ ನ ಭಾಗವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಗದಗದ ಜಿಲ್ಲೆಯ ರೋಣದಲ್ಲಿ ಸುದ್ದಿಗಾರರೊಂದಿಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ಅಭಿವೃದ್ಧಿಗೆ ಬದ್ದ

ರೋಣ ಕ್ಷೇತ್ರದಲ್ಲಿ ಕೈಗಾರಿಕಾ ಅಭಿವೃದ್ದಿಯಾಗಿಲ್ಲ. ರಸ್ತೆ ಸಂಪರ್ಕ ಸಮರ್ಪಕವಾಗಿಲ್ಲ ಎಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಇಡೀ ರಾಜ್ಯದ ಅಭಿವೃದ್ಧಿಗೆ ಬದ್ದವಾಗಿದೆ. ರೋಣದ ಅಭಿವೃದ್ದಿಗೆ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಜನರ ಶ್ರೇಯೋಭಿವೃದ್ಧಿಗೆ ಕೃಷ್ಣಪ್ಪ ಕಂಕಣಬದ್ದ : ಸಿಎಂ ಬೊಮ್ಮಾಯಿ

ದಾಖಲೆ ಪಡೆದು ಪರಿಹಾರ

ಕೋವಿಡ್ ನಿಂದಾಗಿ ಮೃತಪಟ್ಟ ಗ್ರಾಮ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರ ಕುಟುಂಬದವರಿಗೆ ಇನ್ನೂ ಪರಿಹಾರ ನೀಡಲಾಗಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ವಿವರ ತರಿಸಿಕೊಂಡು, ಕೋವಿಡ್ ನಿಂದಲೇ ಮೃತಪಟ್ಟಿರುವ ಬಗ್ಗೆ ದಾಖಲೆ ಪಡೆದು ಪರಿಹಾರವನ್ನು ಖಂಡಿತ ಒದಗಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES