ಬೆಂಗಳೂರು : ಭೋಪಾಲ್ ಅನಿಲ ದುರಂತ ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಹೌದು, ಭೋಪಾಲ್ ಅನಿಲ ದುರಂತಕ್ಕೆ ಸಂಬಂಧಿಸಿದಂತೆ ಯೂನಿಯನ್ ಕಾರ್ಬೈಡ್‌ನಿಂದ ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ, ಮಹತ್ವದ ತೀರ್ಪು ಪ್ರಕಟಿಸಿದೆ.
ಅನಿಲ ದುರಂತ ಸಂತ್ರಸ್ತರಿಗೆ ಯೂನಿಯನ್ ಕಾರ್ಬೈಟ್ ಕಂಪನಿಯಿಂದ 7,400 ಕೊಟಿ ರೂ. ಹೆಚ್ಚುವರಿ ಪರಿಹಾರವನ್ನು ಪಡೆಯಲು ಕೇಂದ್ರ ಸರ್ಕಾರ ಕ್ಯುರೇಟ್ ಅರ್ಜಿಯನ್ನು ಸಲ್ಲಿಸಿತ್ತು.
1984ರಲ್ಲಿ ಭೋಪಾಲ್ ಅನಿಲ ದುರಂತ ಸಂಭವಿಸಿತ್ತು. ಸಂತ್ರಸ್ತರಿಗೆ ಹೆಚ್ಚುವರಿ 7.4 ಕೋಟಿ ರೂ. ಪರಿಹಾರ ಕೋರಿ ಕೇಂದ್ರ ಸರ್ಕಾರ 2010ರ ಲ್ಲಿ ಅರ್ಜಿ ಸಲ್ಲಿಸಿತ್ತು. ಇದನ್ನು ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.