Friday, November 22, 2024

ಒಕ್ಕಲಿಗ ಕುಲಕ್ಕೆ ಮಾಡಿದ ಘೋರ ಅವಮಾನ : ಎಚ್ಡಿಕೆ ಕಿಡಿಕಾರಿದ್ದು ಯಾರ ಮೇಲೆ?

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಪ್ರವಾಸದ ವೇಳೆ, ಉರಿಗೌಡ-ನಂಜೇಗೌಡ ದ್ವಾರ ನಿರ್ಮಿಸಿದ ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಣಿ ಟ್ವೀಟ್‌ಗಳ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಒಕ್ಕಲಿಗ ಕುಲಕ್ಕೆ ಮಾಡಿದ ಘೋರ ಅವಮಾನ ಎಂದು ಅವರು ಕಿಡಿಕಾರಿದ್ದಾರೆ.

ಕೋಮುದ್ವೇಷದ ವಿಷಬೀಜ

ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ ಎಂದು ದೂರಿದ್ದಾರೆ.

ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಾಲಗಂಗಾಧರನಾಥ ಶ್ರೀಗಳಿಗೆ ಅಪಮಾನ

ಮೇಲಾಗಿ, ಮಹಾದ್ವಾರಕ್ಕೆ ಮೊದಲೇ ಇದ್ದ ಪರಮಪೂಜ್ಯ ಗುರುಗಳಾದ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಹೆಸರನ್ನು ಮುಚ್ಚಿಟ್ಟು, ಅವರ ಜಾಗದಲ್ಲಿ ಈ ಕಾಲ್ಪನಿಕ ಪಾತ್ರಗಳ ಹೆಸರನ್ನು ಹಾಕಿದ ದುರುದ್ದೇಶವೇನು? ಇದು ಪರಮಪೂಜ್ಯರಿಗೆ ಮಾಡಿದ ಅಪಮಾನ ಎಂದು ಆಕ್ರೋಶ ಹೊರಹಾಕಿದ್ದಾರೆ.

RELATED ARTICLES

Related Articles

TRENDING ARTICLES