Thursday, November 21, 2024

ಸಿಎಂ ತವರಲ್ಲಿ ಭಾರೀ ಕಲ್ಲು ತೂರಾಟ : ರಟ್ಟಿಹಳ್ಳಿಯಲ್ಲಿ ಪ್ರಕ್ಷುಬ್ಧ ವಾತಾವರಣ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯ ರಟ್ಟಿಹಳ್ಳಿ ಪಟ್ಟಣದಲ್ಲಿ ಸಾರ್ವಜನಿಕರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆದಿದ್ದು, ರಟ್ಟಿಹಳ್ಳಿ ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ನೂರಾರು ಹಿಂದೂ ಕಾರ್ಯಕರ್ತರು ನಡೆಸುತ್ತಿದ್ದ ಶೋಭಾ ಯಾತ್ರೆ ವೇಳೆ ಈ ಘಟನೆ ನಡೆದಿದ್ದು, ಮಹಿಳೆಯರು ಹಾಗೂ ಮಕ್ಕಳು ಗಾಯಗೊಂಡಿದ್ದಾರೆ.

ಒಂದು ವಾರಗಳ ಹಿಂದೆ ರಟ್ಟಿಹಟ್ಟಿ ಪಟ್ಟದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲೂ ತೂರಾಟ ನಡೆದಿತ್ತು ಎನ್ನಲಾಗಿದೆ. ಈ ಹಿನ್ನಲೆ ಇಂದು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಲ್ಲೂ ತೂರಾಟ ಖಂಡಿಸಿ ಶೋಭಾಯಾತ್ರೆ ಹಮ್ಮಿಕೊಂಡಿದ್ದರು. ನೂರಾರು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗಿಯಾಗಿದ್ದು, ಮೆರವಣಿಗೆ ರಟ್ಟಿಹಳ್ಳಿ ಪಟ್ಟಣದ ಕಾರಂಜಿ ಸರ್ಕಲ್‌ ಬಳಿ ಬರುತ್ತಿದ್ದಂತೆ ಕಲ್ಲು ತೂರಾಟ ನಡೆದಿದೆ.

ಇದನ್ನೂ ಓದಿ : ಕಾಫಿನಾಡಲ್ಲಿ ಮತ್ತೊಂದು ಧರ್ಮ ದಂಗಲ್ ಶುರು

ಮನಬಂದಂತೆ ಕಲ್ಲು ತೂರಾಟ

ರಾಯಣ್ಣ ಪುತ್ಥಳಿ ಮೆರವಣಿಗೆಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಗಲಾಟೆ ಆರಂಭವಾಗಿದ್ದು, ದುಷ್ಕರ್ಮಿಗಳು ಮನಬಂದಂತೆ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಮಧ್ಯೆ ಪ್ರವೇಶಿಸಿ ಗುಂಪುಗಳನ್ನು ಚದುರಿಸಿ, ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

ರಟ್ಟಿಹಳ್ಳಿ ಪಟ್ಟಣದ ಕಾರಂಜಿ ಸರ್ಕಲ್‌ನಲ್ಲಿ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣವಿದ್ದು, ಪೊಲೀಸ್‌ ಬಿಗಿಬಂದೋ ಬಸ್ತ್‌ ಮಾಡಲಾಗಿದೆ.

RELATED ARTICLES

Related Articles

TRENDING ARTICLES