Wednesday, January 22, 2025

Big Shock! : KSRTC ಪ್ರಯಾಣಿಕರಿಗೆ ದೊಡ್ಡ ಶಾಕ್

ಬೆಂಗಳೂರು : ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಟೋಲ್ ಸಂಗ್ರಹ ಬೆನ್ನಲ್ಲೇ ಇದೀಗ ಪ್ರಯಾಣಿಕರಿಗೂ ದೊಡ್ಡ ಶಾಕ್ ಎದುರಾಗಿದೆ.

ಹೌದು, ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇಯಲ್ಲಿ ಟೋಲ್ ಸಂಗ್ರಹ ಆರಂಭವಾದ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ  ಉಭಯ ನಗರಗಳ ನಡುವಣ ಪ್ರಯಾಣದ ಟಿಕೆಟ್ ದರ ಹೆಚ್ಚಳ ಮಾಡಿದೆ. ಯುಗಾದಿ ಹಬ್ಬದ ಸಮೀಪದಲ್ಲಿ ಪ್ರಾಯಾಣಿಕರಿಗೆ ಇದು ಮತ್ತಷ್ಟು ಹೊರೆಯಾಗಲಿದೆ.

ಬೆಂಗಳೂರು-ಮೈಸೂರು ಪ್ರಯಾಣದ ದರ ಹೆಚ್ಚಳ ಮಾಡಿ ಕೆಎಸ್​ಆರ್​ಟಿಸಿ ಮಂಗಳವಾರ ಪ್ರಕಟಣೆ ಹೊರಡಿಸಿದೆ. ವೋಲ್ವೋ ಹಾಗೂ ಸಾಮಾನ್ಯ ಬಸ್​​ಗಳಿಗೆ ಪ್ರತ್ಯೇಕವಾಗಿ ದರ ಪರಿಷ್ಕರಣೆ ಮಾಡಲಾಗಿದೆ.

20, 15, 18 ರೂ. ಹೆಚ್ಚಳ

ಐಷಾರಾಮಿ ಬಸ್​​ಗಳ ಪ್ರಯಾಣ ದರ 20 ರೂ. ಸಾಮಾನ್ಯ ಬಸ್ ಪ್ರಯಾಣದ ದರ 15 ರೂ. ಹಾಗೂ ರಾಜಹಂಸ ಬಸ್​​ಗಳ ಪ್ರಯಾಣ ದರವನ್ನು 18 ರೂ. ಹೆಚ್ಚಳ ಮಾಡಲಾಗಿದೆ ಎಂದು ಕೆಎಸ್​ಆರ್​ಟಿಸಿ ಪ್ರಕಟಣೆ ತಿಳಿಸಿದೆ.

ಉಭಯ ನಗರಗಳ ನಡುವಿನ ಎಲೆಕ್ಟ್ರಿಕ್ ಬಸ್ ಮತ್ತು ವೋಲ್ವೋ ಬಸ್‌ಗಳ ಟಿಕೆಟ್‌ಗಳಿಗೂ ದರ ಹೆಚ್ಚಳ ಅನ್ವಯವಾಗಲಿದೆ.  ಇತ್ತ ದರ ಏರಿಕೆಗೆ ಪ್ರಯಾಣಿಕರು  ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

RELATED ARTICLES

Related Articles

TRENDING ARTICLES