Saturday, April 20, 2024

ಬೋರ್ಡ್ ಎಕ್ಸಾಂಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು : ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ಬೋರ್ಡ್‌ ಪರೀಕ್ಷೆ (ಪಬ್ಲಿಕ್ ಪರೀಕ್ಷೆ) ನಡೆಸಲು ಸರಕಾರ ಕೈಗೊಂಡಿದ್ದ ತೀರ್ಮಾನವನ್ನು ಹೈಕೋರ್ಟ್‌ ವಿಭಾಗೀಯ ಪೀಠ ಎತ್ತಿ ಹಿಡಿದಿದೆ.

ಈ ಮೂಲಕ 5ನೇ ಮತ್ತು 8ನೇ ತರಗತಿ ಬೋರ್ಡ್‌ ಎಕ್ಸಾಂಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಬೋರ್ಡ್‌ ಎಕ್ಸಾಂಗೆ ಹೈಕೋರ್ಟ್‌ ವಿಭಾಗೀಯ ಪೀಠ ಅಸ್ತು ಎಂದಿದ್ದು, ಹೈಕೋರ್ಟ್‌ ಏಕಸದಸ್ಯ ಪೀಠದ ಆದೇಶಕ್ಕೆ ಹಿನ್ನಡೆಯಾಗಿದೆ.

ಮಾರ್ಚ್‌ 27ಕ್ಕೆ ಪರೀಕ್ಷೆ ನಡೆಸಲು ಹೈಕೋರ್ಟ್‌ ವಿಭಾಗೀಯ ಪೀಠ ಸೂಚನೆ ನೀಡಿದೆ. ಜೊತೆಗೆ ಕೆಲವೊಂದಿಷ್ಟು ಸೂಚನೆ ನೀಡಿದೆ. ಶಿಕ್ಷಣ ಕಾಯ್ದೆಯಡಿ ಪರೀಕ್ಷೆಗೆ ಅಡ್ಡಿ ಇಲ್ಲ, ಯಾವುದೇ ವಿದ್ಯಾರ್ಥಿಗಳನ್ನ ಫೇಲ್‌ ಮಾಡುವಂತಿಲ್ಲ ಎಂದು ಹೈಕೋರ್ಟ್‌ ವಿಭಾಗೀಯ ಪೀಠ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಜಿ. ನರೇಂದರ್ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಪೀಠ ಈ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದೆ.

ಪೋಷಕರ ಸಂಘಟನೆ ವಿರೋಧ

ಶಿಕ್ಷಣ ಇಲಾಖೆ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಆದರೆ, ಪೋಷಕರ ಸಂಘಟನೆ ಇದನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಿಲೇರಿತ್ತು. ಪೋಷಕರ ಮನವಿಗೆ ಸಮ್ಮತಿಸಿದ್ದ ನ್ಯಾಯಾಲಯ ಸರ್ಕಾರದ ಆದೇಶಕ್ಕೆ ತಡೆ ನೀಡಿತ್ತು.

ಸರ್ಕಾರ ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆಯನ್ನು ಪೀಠವು ಮಾರ್ಚ್​ 14ಕ್ಕೆ ಮುಂದೂಡಿತ್ತು. ಇದೀಗ ಸರಕಾರ ಕೈಗೊಂಡಿದ್ದ ತೀರ್ಮಾನಕ್ಕೆ ನ್ಯಾಯಾಲಯ ಗ್ರೀನ್ ಸಿಗ್ನಲ್ ಕೊಟ್ಟಿದೆ.

RELATED ARTICLES

Related Articles

TRENDING ARTICLES