Wednesday, January 22, 2025

ಎಕ್ಸ್ ಪ್ರೆಸ್ ವೇ ನಿಜವಾಗಿಯೂ ಕಿತ್ತು ಬಂದಿದೆಯೇ? : ಪ್ರತಾಪ್ ಸಿಂಹ ಹೇಳಿದ್ದೇನು?

ಬೆಂಗಳೂರು : ಮೈಸೂರು- ಬೆಂಗಳೂರು (ದಶಪಥ ಹೆದ್ದಾರಿ) ಎಕ್ಸ್‌ಪ್ರೆಸ್ ವೇ ಉದ್ಘಾಟನೆಗೊಂಡ ಮರುದಿನವೇ ಕಿತ್ತುಬಂದಿದೆ ಎನ್ನಲಾದ ಪೋಸ್ಟ್ ಒಂದು ಹರಿದಾಡುತ್ತಿದ್ದು, ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಹುಭಾಷಾ ನಟ ಪ್ರಕಾಶ್ ರೈ ಕೂಡಾ ಟ್ವಿಟ್ ಮಾಡಿ ‘ಪ್ರಜೆಗಳೇ ಮತ್ತೆ ನಮ್ ದುಡೇ ಹಾಳು’ ಎಂದು ಸಿಡಿಮಿಡಿಗೊಂಡಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.

ಸಣ್ಣ ನ್ಯೂನ್ಯತೆ ಸರಿಪಡಿಸಲಾಗುತ್ತಿದೆ

‘ರಸ್ತೆ ಕಿತ್ತು ಬಂದಿಲ್ಲ, Expansion joint ಬಳಿ ಇದ್ದ ಸಣ್ಣ ನ್ಯೂನ್ಯತೆ ಸರಿಪಡಿಸಲಾಗುತ್ತಿದೆ’ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಜೊತೆಗೆ, ಸಾಮಾಜಿಕ ಜಾಲತಾಣದಲ್ಲಿ ನ್ಯೂನ್ಯತೆಯ ಫೋಟೋವನ್ನು ಹಮಚಿಕೊಂಡಿದ್ದಾರೆ.

ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್‌ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ರಸ್ತೆ ಕಿತ್ತು ಬಂದಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಸಾರ್ವಜನಿಕರು ಹಾಗೂ ವಾಹನ ಸವಾರರ ಆಕ್ರೋಶದ ಬಳಿಕ, ದುರಸ್ತಿ ಕಾರ್ಯ ನಡೆದಿದೆ ಎನ್ನಲಾಗಿದೆ.

ಸೇತುವೆ ಬಳಿ ಕಿತ್ತುಬಂದ ರಸ್ತೆ

ಬಿಡದಿ ಬೈಪಾಸ್ ರಸ್ತೆ ಮುಕ್ತಾಯದ ಜಾಗದಲ್ಲಿ ಸೇತುವೆಯೊಂದು ನಿರ್ಮಾಣ ಮಾಡಲಾಗಿದೆ. ಈ ಸೇತುವೆ ಆರಂಭದಲ್ಲಿ ರಸ್ತೆ ಕಿತ್ತು ಬಂದಿದೆ. ಈ ಫೋಟೋ ವೈರಲ್ ಆಗುತ್ತಿದೆ.

RELATED ARTICLES

Related Articles

TRENDING ARTICLES