Wednesday, January 22, 2025

ಡ್ರಮ್ ನಲ್ಲಿ ಲೇಡಿ ಶವ ಪತ್ತೆ : ಮೂವರು ಆರೋಪಿಗಳು ಅಂದರ್

ಬೆಂಗಳೂರು : ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದ ಡ್ರಮ್‍ನಲ್ಲಿ ಮಹಿಳಾ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಮಾಲ್, ತನ್ವೀರ್ ಹಾಗೂ ಶಾಕೀಬ್ ಬಂಧಿತರು. ಬಿಹಾರ ಮೂಲದ ಈ ಮೂವರು ಆರೋಪಿಗಳನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ತಮ್ಮನ್ನಾ 27 ವರ್ಷ ಕೊಲೆಯಾಗಿರೋ ಮಹಿಳೆ.

ವೇಲ್‍ನಿಂದ ಬಿಗಿದು ಕೊಲೆ

ಇಂತಿಕಾಮ್ ಮತ್ತು ತಮ್ಮನ್ನಾ ಮದುವೆ ಆಗಿದ್ದರು. ತಮ್ಮನ್ನಾಳಿಗೆ ಇದು ಎರಡನೇ ಮದುವೆ. ಇದೇ ವಿಚಾರಕ್ಕೆ ಇಂತಿಕಾಮ್ ಮತ್ತು ಸಹೋದರರ ನಡುವೆ ವೈಮನಸ್ಸು ಮೂಡಿತ್ತು. ಈ ಹಿನ್ನೆಲೆಯಲ್ಲಿ ಮಾ.12ರಂದು ಆರೋಪಿಗಳು ಕಲಾಸಿಪಾಳ್ಯದ ಮನೆಗೆ ಊಟಕ್ಕೆ ಕರೆದಿದ್ದರು. ಊಟವಾದ ನಂತರ ಜಗಳ ಶುರುವಾಗಿತ್ತು. ಈ ಜಗಳದಲ್ಲಿ ತಮ್ಮನ್ನಾಳನ್ನು ವೇಲ್‍ನಿಂದ ಬಿಗಿದು ಆರೋಪಿಗಳು ಕೊಲೆ ಮಾಡಿದ್ದರು.

ನಂತರ ಮೃತದೇಹವನ್ನು ಡ್ರಮ್ ನಲ್ಲಿಟ್ಟು ಬಿಹಾರಕ್ಕೆ ಸಾಗಿಸಲು ಯತ್ನಿಸಿದ್ದರು. ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಶವ ಬಿಟ್ಟು ಪರಾಗಿಯಾಗಿದ್ದರು. ಘಟನೆಯಲ್ಲಿ ಇನ್ನೂ ಐವರು ನಾಪತ್ತೆಯಾಗಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಖಾಕಿ ಪಡೆ ಕಾರ್ಯಾಚರನೆ ಆರಂಭಿಸಿದ್ದಾರೆ.

RELATED ARTICLES

Related Articles

TRENDING ARTICLES