Friday, March 29, 2024

ದೈವಕ್ಕೆ ಅವಮಾನ : ಹೀಗಿದೆ ಆರಗ ಜ್ಞಾನೇಂದ್ರ ಸ್ಪಷ್ಟನೆ

ಬೆಂಗಳೂರು : ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ಬೆಂಬಲಿಗರು ‘ಶಿವದೂತೆ ಗುಳಿಗೆ’ ತುಳು ನಾಟಕದ ಪೋಸ್ಟರ್ ಹಾಕಿದ್ದ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಲೇವಡಿ ಮಾಡುವ ದೈವಕ್ಕೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನಿಡಿದ್ದು, ನಾನು ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದೇನೆ. ತುಳು ಸಂಸ್ಕೃತಿ, ದೈವಗಳನ್ನಲ್ಲ ಎಂದು ಹೇಳಿದ್ದಾರೆ.

ದೈವದ ಬಗ್ಗೆ ಅಪಾರ ಭಕ್ತಿ -ಗೌರವ

ನೆರೆಯ ತುಳು ನಾಡಿನಲ್ಲಿ, ಶ್ರದ್ಧಾ ಭಕ್ತಿಯಿಂದ ಆರಾಧಿಸುವ, ಗುಳಿಗ ದೈವವನ್ನು ಆಧರಿಸಿ, ರಚಿಸಿರುವ ಪೌರಾಣಿಕ ನಾಟಕದ ಬಗ್ಗೆ ಮೆಚ್ಚುಗೆ ಇದೆ ಹಾಗೂ ದೈವದ ಬಗ್ಗೆ ಅಪಾರ ಭಕ್ತಿ  ಗೌರವವನ್ನು ಹೊಂದಿದ್ದೇನೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ : ಇಂದೇ ಆದೇಶ : ಸಿಎಂ ಬೊಮ್ಮಾಯಿ ಮಹತ್ವದ ಘೋಷಣೆ

ರಂಗಭೂಮಿಯ ಮೇಲೆ, ಆಧುನಿಕ ತಂತ್ರಜ್ಞಾನವನ್ನು  ಬಳಸಿಕೊಂಡು, ಯಶಸ್ವಿ ಪ್ರದರ್ಶನವನ್ನು ಕಲಾ ರಸಿಕರಿಗೆ ಪರಿಚಯಿಸುತ್ತಿ ರುವ, ಕಲಾವಿದರು ಹಾಗೂ ವಿಶೇಷವಾಗಿ,  ನಿರ್ದೇಶಕ, ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ ಸೃಜನಶೀಲತೆ  ಬಗ್ಗೆ, ಅಭಿಮಾನ ಇದೆ ಎಂದು ಹೇಳಿದ್ದಾರೆ.

ದೈವದ ವಿರುದ್ಧ ಮಾತನಾಡಿಲ್ಲ

ಆದರೆ, ಜನರ ವಿಶ್ವಾಸ ಕಳೆದು ಕೊಂಡಿರುವ, ತೀರ್ಥಹಳ್ಳಿಯ ಸ್ಥಳೀಯ ಕಾಂಗ್ರೆಸ್ ನಾಯಕರು, ಕೇವಲ ರಾಜಕೀಯ ದುರುದ್ದೇಶದಿಂದ, ಶಿವದೂತೆ ಗುಳಿಗೆ, ನಾಟಕದ ಪ್ರದರ್ಶನದ ಮೂಲಕ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಹತಾಶ ಪ್ರಯತ್ನದ ಬಗ್ಗೆ ಪ್ರಸ್ತಾಪಿಸಿದ್ದೇನೆಯೇ ಹೊರತು, ನಾಟಕದ ಬಗ್ಗೆ ಅಥವಾ ದೈವದ ವಿರುದ್ಧ ಮಾತನಾಡಿಲ್ಲ ಎಂದು ತಿಳಿಸಿದ್ದಾರೆ.

ನಾನಾಡಿದ ಮಾತುಗಳನ್ನು, ಅಪಾರ್ಥ ಬರುವಂತೆ ಮೂಡಿಸಿ, ಸಾಮಾಜಿಕ ಜಾಲತಾಣಗಳಲ್ಲಿ, ಅಪ ಪ್ರಚಾರ ನಡೆಸುತ್ತಿರುವವರ ಉದ್ದೇಶ ಈಡೇರುವುದಿಲ್ಲ ಎಂದು ಈ ಮೂಲಕ ಸ್ಪಷ್ಟ ಪಡಿಸುತ್ತಿದ್ದೇವೆ ಎಂದಿದ್ದಾರೆ.

RELATED ARTICLES

Related Articles

TRENDING ARTICLES