Monday, December 23, 2024

‘ಕಬ್ಜ’ ಟೆಂಪಲ್ ರನ್ : ರಿಲೀಸ್ ಗೂ ಮುನ್ನ ತಿಮ್ಮಪ್ಪನ ದರ್ಶನ

ಬೆಂಗಳೂರು : ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಕಬ್ಜ ಸಿನಿಮಾ ನಾಳೆ ವಿಶ್ವದಾದ್ಯಂತ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರತಂಡ ಟೆಂಪಲ್ ರನ್ ಆರಂಭಿಸಿದೆ.

ಹೌದು, ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದೆ. ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ಇತ್ತ, ನಿರ್ದೇಶಕ ಆರ್. ಚಂದ್ರು, ಉಪ್ಪಿ ಅಂಡ್ ಟೀಂ ತಿರುಪತಿ ತಿಮ್ಮಪ್ಪನ ದರ್ಶಶನಕ್ಕೆ ತೆರಳಿದ್ದಾರೆ.

ಕಬ್ಜ ಸಿನಿಮಾ ಯಾವುದೇ ಅಡೆತಡೆ ಎದುರಿಸದೆ ಭರ್ಜರಿ ಓಪನಿಂಗ್ ಪಡೆದು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯಲಿ ಎಂದು ಕಬ್ಜ ತಂಡ ತಿಮ್ಮಪ್ಪನ ಮೊರೆ ಹೋಗಿದೆ. ತಿರುಪತಿಗೆ ಹೋಗುವ ಮುನ್ನ ಕಬ್ಜ ತಂಡ ವಿಮಾನದ ಮುಂದೆ ಸೆಲ್ಫಿ ಕ್ಲಿಕ್ಕಿಸಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕನ್ನಡ ಸೇರಿ 5 ಭಾಷೆಗಳಲ್ಲಿ ಸಿನಿಮಾ ತೆರೆಗೆ

ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದೆ. ಸಿನಿಮಾ ನೋಡಲು ಅಭಿಮಾನಿಗಳು ಕಾಯ್ತಾ ಇದ್ದಾರೆ. ಉಪೇಂದ್ರನ ನಟನೆ ತೆರೆ ಮೇಲೆ ನೋಡಲು ಕಾತುರರಾಗಿದ್ದಾರೆ. ಶುಕ್ರವಾರ (ಮಾರ್ಚ್ 17) ರಂದು ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

ಇಂದು ಮುಂಜಾನೆ ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

4 ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್

ಕಬ್ಜ ಸಿನಿಮಾ 4 ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಕಬ್ಜ ಸಿನಿಮಾ ಸ್ವಾತಂತ್ರ್ಯ ಪೂರ್ವದ ಭೂಗತ ಲೋಕದ ಕಥೆ. ಕೆಜಿಎಫ್ ಖ್ಯಾತಿಯ ಶಿವಕುಮಾರ್ ಕಲಾ ನಿರ್ದೇಶನ ಮಾಡಿದ್ದಾರೆ. ಉಪೇಂದ್ರಗೆ ನಾಯಕಿಯಾಗಿ ಶ್ರೀಯಾ ಶರಣ್ ಕಾಣಿಸಿಕೊಂಡಿದ್ದಾರೆ. ಕೆಜಿಎಫ್ ಚಿತ್ರ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

RELATED ARTICLES

Related Articles

TRENDING ARTICLES