Wednesday, January 22, 2025

ಕೊಲೆ ಮಾಡ್ತಿನಿ .. ಮತ್ತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸಂಜನಾ ಗಲ್ರಾನಿ

ಬೆಂಗಳೂರು : ಕೊಲೆ ಮಾಡ್ತೀನಿ ಅಂತಾ ನನಗೆ ಕೆಲವರು ಬೆದರಿಕೆ ಹಾಕಿದ್ದಾರೆ ಎಂದು ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಪೊಲೀಸ್ ಠಾಣೆ ಮೆಟ್ಟಿ ಲೇರಿದ್ದಾರೆ.

ಹೌದು, ಕ್ಷುಲ್ಲಕ ಕಾರಣದಿಂದ ನಟಿ ಸಂಜನಾ ಗಲ್ರಾನಿ ಬೆಂಗಳೂರಿನ ಇಂದಿರಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪಾರ್ಕಿಂಗ್ ವಿಚಾರವಾಗಿ ಸ್ಥಳೀಯ ನಿವಾಸಿಗಳ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಕೊಲೆ ಮಾಡ್ತಿನಿ ಅಂತ ಬೆದರಿಕೆ ಹಾಕಿದ್ದಾರೆ ಎಂದು ಸಂಜನಾ ಪೊಲೀಸರಿಗೆ ದೂರು ನೀಡಿದ್ದಾರೆ.

ಇಂದಿರಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕೋರ್ಟ್​ ಅನುಮತಿ ಪಡೆದು ಎಫ್ಐಆರ್ ದಾಖಲು ಮಾಡಿದ್ದಾರೆ. ಪಾರ್ಕಿಂಗ್ ವಿಚಾರವಾಗಿ ಸ್ಥಳೀಯ ನಿವಾಸಿಗಳ ಜೊತೆ ನಟಿ ಸಂಜನಾ ಗಲಾಟೆ ಮಾಡಿಕೊಂಡಿದ್ದಾರೆ.

ಕೊಲೆ ಬೆದರಿಕೆ ಹಾಕುತ್ತಾರೆ

ಇಂದಿರಾನಗರದ ಧೂಪನಹಳ್ಳಿಯಲ್ಲಿ ಸಂಜನಾ ಗಲ್ರಾನಿ ವಾಸವಿದ್ದಾರೆ. ಇದೀಗ, ಸ್ಥಳಿಯರಾದ ಯಶೋಧಮ್ಮ, ರಾಜಣ್ಣ ಎಂಬವರ ಮೇಲೆ ಸಂಜನಾ ಆರೋಪ ಮಾಡಿದ್ದಾರೆ. ರಸ್ತೆಗೆ ಅಡ್ಡಲಾಗಿ ಕಾರ್​ಗಳನ್ನು ನಿಲ್ಲಿಸುತ್ತಾರೆ. ಪ್ರಶ್ನೆ ಮಾಡಿದ್ರೆ ಕೊಲೆ ಬೆದರಿಕೆ ಹಾಕುತ್ತಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ಅಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸಂಜನಾ ಆರೋಪ ಮಾಡಿದ್ದಾರೆ. ಈ ಸಂಬಂಧ ಇಂದಿರಾನಗರ ಠಾಣೆ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.

RELATED ARTICLES

Related Articles

TRENDING ARTICLES