Thursday, January 9, 2025

ಬಿಎಸ್ ವೈ ಸ್ಫೋಟಕ ಹೇಳಿಕೆ : ಅವರ.. ಸಿಎಂ ಕನಸು ನನಸಾಗುವುದಿಲ್ಲ

ಬೆಂಗಳೂರು : ಮುಖ್ಯಮಂತ್ರಿ ಕನಸು ಕಾಣುವ ವಿರೋಧ ಪಕ್ಷದವರ ಕನಸು ನನಸಾಗುವುದಿಲ್ಲ. ವಾತಾವರಣ ನಮ್ಮ ಪರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರು ಬಂದಾಗ ಜನ ತೋರಿಸಿದ ಜನಬೆಂಬಲ ನೋಡಿದಾಗ ಆಶ್ಚರ್ಯ ಆಗುತ್ತದೆ. ಕಾಂಗ್ರೆಸ್‍ನಲ್ಲಿ ಸಮರ್ಪಕ ನಾಯಕರಿಲ್ಲ ಎಂದು ಕುಟುಕಿದ್ದಾರೆ.

ಯಾರು ಏನೇ ಹೇಳಿದರೂ ಕರ್ನಾಟಕದಲ್ಲಿ ನೂರಕ್ಕೆ ನೂರು ಬಿಜೆಪಿ ಸರಕಾರ ಬರುವುದು ನಿಶ್ಚಿತ. ಬಿಜೆಪಿ 140ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ನಿರೀಕ್ಷೆಗೂ ಮೀರಿ ಜನಬೆಂಬಲ

ಬಿಜೆಪಿ ಜನಸಂಕಲ್ಪ ಯಾತ್ರೆಯು ಶೃಂಗೇರಿ, ಮೂಡಿಗೆರೆ, ಚಿಕ್ಕಮಗಳೂರಿನಲ್ಲಿ ನಡೆಯಲಿದೆ. ಸುಮಾರು 50 ತಾಲ್ಲೂಕು ಕೇಂದ್ರಗಳಿಗೆ ಹೋಗಿ ಬಂದಿದ್ದೇನೆ. ನಿರೀಕ್ಷೆಗೂ ಮೀರಿ ಜನಬೆಂಬಲ ಸಿಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಶಾಸಕ ಡಿ.ಎನ್.ಜೀವರಾಜ್, ಜಿಲ್ಲಾಧ್ಯಕ್ಷ ಕಲ್ಮರುಡಪ್ಪ, ಸಂಚಾಲಕ ರಾಜೇಂದ್ರ, ಸಹ ಸಂಚಾಲಕ ದತ್ತಾತ್ರಿ, ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಇದ್ದರು.

RELATED ARTICLES

Related Articles

TRENDING ARTICLES