Wednesday, January 22, 2025

ಕಾಂಗ್ರೆಸ್ಸಿನ ಸುಳ್ಳಿನ ಫ್ಯಾಕ್ಟರಿಯಿಂದ ಬಂದ ಫೇಕ್ ನ್ಯೂಸ್ : ಸಿ.ಟಿ. ರವಿ

ಬೆಂಗಳೂರು : ಲಿಂಗಾಯುತ ಸಮುದಾಯದ ಅವಹೇಳನಾಕಾರಿ ಹೇಳಿಕೆ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ನಾಯಕರ ಆರೋಪಗಳಿಗೆ ತಿರುಗೇಟು ಕೊಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಬಳಿಕ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಾನೆಂದು ಜಾತಿ ರಾಜಕಾರಣ ಮಾಡಿಲ್ಲ. ಆ ಬಗ್ಗೆ ನನ್ನ ಕನಸು-ಮನಸ್ಸಿಲ್ಲಿಯೂ ಯೋಚನೆ ಮಾಡಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಸುಳ್ಳಿನ ಫ್ಯಾಕ್ಟರಿಯ ಫೇಕ್ ನ್ಯೂಸ್

ಲಿಂಗಾಯುತ ಸಮುದಾಯದ ಅವಹೇಳನಾಕಾರಿ ಹೇಳಿಕೆ ಎಂದು ಕಾಂಗ್ರೆಸ್ ಬಿಂಬಿಸುತ್ತಿದ್ದು, ಅದು ಕಾಂಗ್ರೆಸ್ಸಿನ ಸುಳ್ಳಿನ ಫ್ಯಾಕ್ಟರಿಯಿಂದ ಬಂದ ಫೇಕ್ ನ್ಯೂಸ್, ಕಾಂಗ್ರೆಸ್ಸಿಗರೇ ಹಬ್ಬಿಸಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ಬೋಗಸ್ ಕಾರ್ಡ್ ಗೆ ಬೆಂಕಿ ಹಚ್ಚಿ : ರೇಣುಕಾಚಾರ್ಯ

ಕಾಂಗ್ರೆಸ್ ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಲಿಂಗಾಯತ ವಿರೋಧಿ ಭಾವನೆ ಹುಟ್ಟು ಹಾಕುವ ಕೆಲಸ ಮಾಡುತ್ತಿದೆ. ಇಂತಹ ಪ್ರಯತ್ನವನ್ನು ಹಿಂದೆಯೂ ಮಾಡಿ ವಿಫಲರಾಗಿದ್ದಾರೆ. ಈಗಲೂ ಮಾಡುತ್ತಿದ್ದಾರೆ. ಈಗಲೂ ವಿಫಲರಾಗುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ನಾನು ಮಾತನಾಡದಿದ್ದರೆ ಕ್ಷಮೆಯಾಚನೆ ಮಾಡುತ್ತಿದ್ದೆ. ನಾನು ಆ ರೀತಿ ಮಾತನಾಡಿಲ್ಲ. ಕ್ಷಮೆ ಕೇಳುವ ಪ್ರಮೇಯವೇ ಇಲ್ಲ ಎಂದು ಸಿ.ಟಿ ರವಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES