Wednesday, January 22, 2025

ಸಿಎಂ ಬೊಮ್ಮಾಯಿ ಸೋಲು : ಇದೇ ಕಾಂಗ್ರೆಸ್ ಮಾಸ್ಟರ್ ಪ್ಲಾನ್

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತವರಿನಲ್ಲೇ ಸೋಲಿಸಲು ಕಾಂಗ್ರೆಸ್ ಪಕ್ಷ ರಣತಂತ್ರ ರೂಪಿಸಿದೆ.

ಹೌದು, ಕಳೆದ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಆದರೆ, ಗೆಲುವಿನ ಅಂತರ ಕೇವಲ 10ರಿಂದ12 ಸಾವಿರ ಮಾತ್ರ ಇದೆ. ಇದನ್ನೇ ಕಾಂಗ್ರೆಸ್ ದಾಳವಾಗಿ ಬಳಸಿಕೊಳ್ಳುತ್ತಿದೆ.

ಶಿಗ್ಗಾವಿ ಕ್ಷೇತ್ರದಲ್ಲಿ ಲಿಂಗಾಯತರ ಪ್ರಾಬಲ್ಯವಿದ್ದರೂ, ಅಲ್ಪಸಂಖ್ಯಾತ (ಮುಸ್ಲಿಂ) ಮತಗಳು ನಿರ್ಣಾಯಕ. ಹೀಗಾಗಿ, ಸಿಎಂ ಬೊಮ್ಮಾಯಿ ಅವರ ವಿರುದ್ಧ ಲಿಂಗಾಯತ ಅಭ್ಯರ್ಥಿ ವಿನಯ್ ಕುಲಕರ್ಣಿಯನ್ನು ಕಣಕ್ಕಿಳಿಸಿ ವೋಟ್ ಬ್ಯಾಂಕ್ ಒಡೆದು, ಮುಸ್ಲಿಂ ಮತಗಳ ಸಹಾಯದಿಂದ ಕಾಂಗ್ರೆಸ್ ಗೆಲ್ಲಿಸುವುದು ಟಾರ್ಗೆಟ್ ಆಗಿದೆ ಎಂದು ತಿಳಿದುಬಂದಿದೆ.

ವಿನಯ್ ಕುಲಕರ್ಣಿ ಸ್ಪರ್ಧೆ?

ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬೊಮ್ಮಾಯಿ ವಿರುದ್ಧ ಮಾಜಿ ಶಾಸಕ ವಿನಯ್ ಕುಲಕರ್ಣಿ ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ತಾಲೀಮು ನಡೆಸುತ್ತಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಈಗಾಗಲೇ, ವಿನಯ್ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ.

ಸಿಎಂ ಬೊಮ್ಮಾಯಿ ವಿರುದ್ಧ ಸ್ಪರ್ಧಿಸುವಂತೆ ವಿನಯ್ ಕುಲಕರ್ಣಿಗೆ ಒತ್ತಡ ಹೇರಿದ್ದಾರೆ. ಮತ್ತೊಂದೆಡೆ, ಎಂ.ಬಿ.ಪಾಟೀಲ್ ಹಾಗೂ ವಿನಯ್ ಕುಲಕರ್ಣಿ ದೆಹಲಿಗೆ ಭೇಟಿ ನೀಡಿದ್ದು, ವರಿಷ್ಠರ ಜೊತೆ ಚರ್ಚೆ ನಡೆಸಲಿದ್ದಾರೆ. ವಿನಯ್ ಕುಲಕರ್ಣಿ ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕರಾಗಿದ್ದಾರೆ. ಅಲ್ಲದೆ, ಲಿಂಗಾಯಿತ ಸಮುದಾಯಕ್ಕೆ ಸೇರಿದ್ದಾರೆ.

RELATED ARTICLES

Related Articles

TRENDING ARTICLES