Wednesday, January 22, 2025

ಬಿಜೆಪಿ ಹೆಬ್ಬಾಗಿಲು ಶಾಶ್ವತವಾಗಿ ಕ್ಲೋಸ್ ಆಗುತ್ತೆ : ಎಚ್ ಡಿಕೆ ಭವಿಷ್ಯ

ಬೆಂಗಳೂರು : ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ಹರಿಬಿಡುತ್ತಿರುವ ಬಿಜೆಪಿ ನಾಕಯರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಮದರಸಾಗಳನ್ನು ಸಂಪೂರ್ಣವಾಗಿ ಬಂದ್ ಮಾಡುತ್ತೇವೆ ಎಂಬ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶುಕ್ರವಾರಸಂತೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ತಾನೇ ನಿಷೇಧಿಸುವುದು. ಈ ಚುನಾವಣೆ ಬಿಜೆಪಿಯ ದಕ್ಷಿಣ ಭಾರತದ ಹೆಬ್ಬಾಗಿಲು ಶಾಶ್ವತವಾಗಿ ಬಂದ್ ಆಗಲಿದೆ. ಬಿಜೆಪಿಯವರು ಹೋಗುತ್ತಿರುವ ಮಾರ್ಗ ನೋಡಿದರೆ ಹಾಗೆಯೇ ಅನಿಸುತ್ತದೆ. ಏನಾದರೂ ಅಲ್ಪಸ್ವಲ್ಪ ಬದಲಾವಣೆ ಮಾಡಿಕೊಂಡರೆ ಉಳಿಯುತ್ತಾರೆ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ : ಪಂಚರತ್ನ ಯಾತ್ರೆ ಎಂಜಿನ್ ಹಾಸನದಲ್ಲೇ ಸೀಜ್ : ಕಟೀಲ್ ಲೇವಡಿ

ಟಿಪ್ಪು ಹಾಸನಕ್ಕೆ ಇಟ್ಟ ಹೆಸರು ಕೈಮಾಬಾದ್

ಇನ್ನೊಂದೆಡೆ, ಟಿಪ್ಪು ಹಾಸನಕ್ಕೆ ಇಟ್ಟ ಹೆಸರು ಕೈಮಾಬಾದ್ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತೊಂದು ಹೊಸ ವಿಷಯವನ್ನು ತೇಲಿಬಿಟ್ಟಿದ್ದಾರೆ.

ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಉರಿಗೌಡ, ನಂಜೇಗೌಡ್ರು ಟಿಪ್ಪುನನ್ನು ಕೊಂದಿರುವುದು ಐತಿಹಾಸಿಕ ಸತ್ಯ. ಟಿಪ್ಪು ಹಾಸನಕ್ಕೆ ಇಟ್ಟ ಹೆಸರು ಕೈಮಾಬಾದ್, ಹಾಸನಕ್ಕೆ ಕೈಮಾಬಾದ್ ಎಂದು ಕರೆಯುವುದಕ್ಕೆ ಕುಮಾರಸ್ವಾಮಿಗೆ ಇಷ್ಟ ಇರಬಹುದು ಎಂದು ತಿರುಗೇಟು​ ಕೊಟ್ಟಿದ್ದಾರೆ.

RELATED ARTICLES

Related Articles

TRENDING ARTICLES