ಬೆಂಗಳೂರು : ವಿಧಾನಸಭಾ ಚುನಾವಣಾ ಹೊಸ್ತಿಲಿನಲ್ಲಿ ಟಿಪ್ಪು ಸಾವಿನ ಬಗ್ಗೆ, ಟಿಪ್ಪು ಕೊಮದವರು ಯಾರು ಎಂಬ ಬಗ್ಗೆಯೇ ಹೆಚ್ಚು ಚರ್ಚೆ ನಡೆಯುತ್ತಿದೆ. ಬಿಜೆಪಿ ನಾಯಕರ ಹೇಳಿಕೆಗಳಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಕಿಡಿಕಾರಿದ್ದಾರೆ.
ಅದರಲ್ಲೂ ಮಾಜಿ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಆರ್. ಅಶೋಕ್ ನಡುವೆ ಮುಸುಕಿನ ಗುದ್ದಾಟ ಏರ್ಪಟ್ಟಿದೆ. ಒಕ್ಕಲಿಗ ಸಮುದಾಯಕ್ಕೆ ಬಿಜೆಪಿ ಅವಮಾನ ಮಾಡುತ್ತಿದೆ ಎಂದು ದಳಪತಿ ಗುಡುಗಿದ್ದಾರೆ.
ಇತ್ತ, ಕಂದಾಯ ಸಚಿವ ಆರ್.ಅಶೋಕ್ ದಳಪತಿಯ ಮೇಲೆ ದಾಳ ಉರಳಿಸುತ್ತಿದ್ದಾರೆ. ಟಿಪ್ಪು ಸುಲ್ತಾನ್ ಹತ್ಯೆ ಮಾಡಿದ ಉರಿಗೌಡ ಹಾಗೂ ನಂಜೇಗೌಡ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ಸಾಕಷ್ಟು ಅನುಮಾನವಿದೆ. ಈ ಬಗ್ಗೆ ನೈಜ ಇತಿಹಾಸವೇ ಅಥವಾ ಕಾಲ್ಪನಿಕವೇ ಎಂಬುದನ್ನು ಮತ್ತೊಮ್ಮೆ ಪರಿಶೀಲನೆ ನಡೆಸಲಾಗುವುದು ಎಂದು ಅಶೋಕ್ ತಿಳಿಸಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ಬೋಗಸ್ ಕಾರ್ಡ್ ಗೆ ಬೆಂಕಿ ಹಚ್ಚಿ : ರೇಣುಕಾಚಾರ್ಯ
ಬಿಜೆಪಿಗೆ ಅನುಮಾನಗಳಿಲ್ಲ
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಇತಿಹಾಸದ ಆಧಾರದ ಮೇರೆಗೆ ಬಿಜೆಪಿ ಟಿಪ್ಪು ಕೊಂದಿದ್ದು ಉರಿಗೌಡ ಮತ್ತು ನಂಜೇಗೌಡ ಎಂದು ನಿಲುವು ತಳೆದಿದೆ. ಇದಕ್ಕೆ ಸಂಬಂಧಿಸಿದಂತೆ ಬಿಜೆಪಿಗೆ ಅನುಮಾನಗಳಿಲ್ಲ ಎಂದು ಹೇಳಿದ್ದಾರೆ.
ಜೆಡಿಎಸ್, ಕಾಂಗ್ರೆಸ್ ನಾಯಕರಿಗೆ ಅನುಮಾನಗಳಿವೆ. ಅದರಲ್ಲೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅನಮಾನಗಳು ಇರುವಂತೆ ಕಾಣುತ್ತಿದೆ. ಮತ್ತೊಮ್ಮೆ ಪರಿಶೀಲಿಸಿ ಅನುಮಾನ ಬಗೆಹರಿಸಿಕೊಳ್ಳೋಣ. ಇತಿಹಾಸವನ್ನು ತಿರುಚಲು ಯಾರಿಂದಲೂ ಸಾಧ್ಯವಿಲ್ಲ ಎಂದು ಆರ್. ಅಶೋಕ್ ತಿಳಿಸಿದ್ದಾರೆ.