ಬೆಂಗಳೂರು : ಕರ್ನಾಟಕ ರಾಜ್ಯ ಚುನಾವಣಾ ಕಣ ರಂಗೇರುತ್ತಿದೆ. ಎಲೆಕ್ಷನ್ ಘೋಷಣೆಗೆ ಕೆಲವೇ ದಿನಗಳು ಬಾಕಿ ಇವೆ. ರಾಜಕೀಯ ಪಕ್ಷಗಳು ಮತದಾರರ ಮನ ಗೆಲ್ಲಲು ಭರ್ಜರಿ ತಯಾರಿ ಮಾಡುತ್ತಿವೆ. ಆದ್ರೆ, ಮಾಜಿ ಸಿಎಂ ಸಿದ್ದರಾಮಯ್ಯನವರ ಕ್ಷೇತ್ರ ಗೊಂದಲ ಮುಂದುವರೆದಿದೆ.
ಕೋಲಾರ ಕ್ಷೇತ್ರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ನಡೆದ ಸಿಇಸಿ ಸಭೆಯಲ್ಲಿ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯರಿಗೆ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಹಾಗೂ ಕೋಲಾರದಿಂದ ಹಿಂದೆ ಸರಿಯುವಂತೆ ಸಲಹೆ ನೀಡಿದ್ದಾರೆ ಎಂಬ ಬಗ್ಗೆ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಕ್ಷದ ಹೈಕಮಾಂಡ್ ಎಲ್ಲಿ ಸ್ಪರ್ಧಿಸಬೇಕೆಂದು ತೀರ್ಮಾನಿಸುತ್ತದೋ ಅಲ್ಲಿಂದ ಸ್ಪರ್ಧಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ರಾಹುಲ್ ಕ್ಷಮೆ ಕೇಳಿದ್ರ ಮಾತ್ರ ಮಾತನಾಡಲು ಅವಕಾಶ : ಬಿಜೆಪಿ ಪಟ್ಟು
ಯುಗಾದಿ ಹಬ್ಬದಂದು ಮೊದಲ ಪಟ್ಟಿ
ಯಾರಿಗೆ ಟಿಕೆಟ್ ನೀಡಬೇಕೆಂಬುದನ್ನು ನಿನ್ನೆ ನಡೆದ ಪಕ್ಷದ ಸಭೆಯಲ್ಲಿ ತೀರ್ಮಾನಿಸಿದ್ದು ಯುಗಾದಿ ಹಬ್ಬದಂದು ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ನಂಜನಗೂಡು ಕ್ಷೇತ್ರದಲ್ಲಿ ಧ್ರುವನಾರಾಯಣ ಪುತ್ರ ಸ್ಪರ್ಧಿಸುತ್ತಾರೆ. ನಾನು ಆರ್.ಧ್ರುವನಾರಾಯಣ ಪುತ್ರ ದರ್ಶನ್ ಪರ ಇದ್ದೇನೆ. ನಂಜನಗೂಡು ಕ್ಷೇತ್ರದಲ್ಲಿ ಸ್ಪರ್ಧಿಸಲ್ಲವೆಂದು ಮಹದೇವಪ್ಪ ಹೇಳಿದ್ದಾರೆ. ಮಹದೇವಪ್ಪ ಸ್ಪರ್ಧಿಸಲ್ಲ ಎಂದ ಮೇಲೆ ದರ್ಶನ್ಗೆ ಟಿಕೆಟ್ ಕೊಡ್ತೀವಿ ಎಂದು ಹೇಳಿದ್ದಾರೆ.