Monday, December 23, 2024

ಧಮ್, ತಾಕತ್ತಿದ್ರೆ ಸಿದ್ದರಾಮಯ್ಯ ಕೋಲಾರದಲ್ಲಿ ನಿಲ್ಲಲಿ : ವರ್ತೂರು ಪ್ರಕಾಶ್ ಸವಾಲ್

ಬೆಂಗಳೂರು : ಕೋಲಾರ ಕ್ಷೇತ್ರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿ ಸಿದ್ದರಾಮಯ್ಯಗೆ ಸಲಹೆ ನೀಡಿದ್ದಾರೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಎದುರಾಳಿಗಳು ಸಿದ್ದರಾಮಯ್ಯ ವಿರುದ್ಧ ಗುಡುಗುತ್ತಿದ್ದಾರೆ.

ಈ ಸಂಬಂಧ ಮಾತನಾಡಿರುವ ಬಿಜೆಪಿ ಮುಖಂಡ ವರ್ತೂರು ಪ್ರಕಾಶ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಸವಾಲ್ ಹಾಕಿದ್ದಾರೆ. ಧಮ್​​​, ತಾಕತ್ತಿದ್ರೆ ಸಿದ್ದರಾಮಯ್ಯ ಕೋಲಾರದಲ್ಲಿ ನಿಲ್ಲಲಿ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ ಈ ಚಿಲ್ಲರೆ ಮುಂದೆ ನಿಂತು ಗೆದ್ದು ತೋರಿಸಲಿ. ತಮ್ಮನ್ನು ಚಿಲ್ಲರೆ ಎಂದಿದ್ದ ಸಿದ್ದರಾಮಯ್ಯಗೆ ವರ್ತೂರು ಪ್ರಕಾಶ್ ಕಾಲೆಲೆದಿದ್ದಾರೆ. ಜೊತೆಗೆ, ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ.

ಗೊಂದಲದಲ್ಲಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯಗೆ ಕೋಲಾರ ಕ್ಷೇತ್ರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸಲಹೆ ನೀಡಿದ್ದಾರೆ. ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಹೇಳಿದ್ದಾರೆ. ಹೀಗಾಗಿ, ಸಿದ್ದರಾಮಯ್ಯ ಗೊಂದಲಕ್ಕೀಡಾಗಿದ್ದಾರೆ. ಕೋಲಾರ, ವರುಣಾ ಹಾಗೂ ಬಾದಾಮಿ ಸೇರಿದಂತೆ ಯಾವ ಕ್ಷೇತ್ರದಿಂದ ಕಣಕ್ಕಿಳಿಯಬೇಕು ಎಂಬ ಪೀಕಲಾಟ ಎದುರಾಗಿದೆ.

ಇದನ್ನೂ ಓದಿ : ನಮಗೆ ಮೈತ್ರಿ ಪ್ರಪೋಸಲ್ ಬಂದಿದೆ : ಡಿಕೆಶಿ ಸ್ಫೋಟಕ ಹೇಳಿಕೆ

ಕೋಲಾರ ಕಾರ್ಯಕ್ರಮ ರದ್ದು

ಕೋಲಾರ ಕ್ಷೇತ್ರದಿಂದ ಸ್ಪರ್ಧಿಸದಂತೆ ಸೂಚನೆ ಬಂದ ಹಿನ್ನೆಲೆಯಲ್ಲಿ ನಾಳೆ ಕೋಲಾರದಲ್ಲಿ ನಿಗದಿಯಾಗಿದ್ದ ಸಿದ್ದರಾಮಯ್ಯ ಪ್ರವಾಸ ರದ್ದಾಗಿದೆ. ಇನ್ನೂ, ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೋಲಾರ ಕಾಂಗ್ರೆಸ್ ಮುಖಂಡರ ಜೊತೆಗೆ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

RELATED ARTICLES

Related Articles

TRENDING ARTICLES