Thursday, April 18, 2024

ಮೋದಿ ಫೋಟೋ ಸ್ಟೇಟಸ್ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ

ಬೆಂಗಳೂರು : ಸಮಾಜದಲ್ಲಿ ಜನರು ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ವಾಕ್ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುವ ಘಟನೆಗಳು ಇತ್ತೀಚೆಗೆ ಹೆಚ್ಚಾಗುತ್ತಿದೆ. ಇದರಿಂದ ಸಮಾಜದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಗದಗದಲ್ಲಿ ನಡೆದಿರುವ ಘಟನೆಯೇ ತಾಜಾ ಉದಾಹರಣೆ ಎನ್ನಬಹುದು.

ಹೌದು, ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ಸ್ಟೇಟಸ್ ಇಟ್ಟಿದ್ದಕ್ಕೆ ಯುವಕನೋರ್ವನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಈ ಘಟನೆ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ನಡೆದಿದೆ.

ರಾಘವೇಂದ್ರ ಪೂಜಾರ ಹಲ್ಲೆಗೊಳಗಾದ ಯುವಕ. ಕಾಂಗ್ರೆಸ್​ ಕಾರ್ಯಕರ್ತರಾದ ಮಲ್ಲರಡ್ಡಿ ಅಗಸನಕೊಪ್ಪ, ಶ್ರೀನಿವಾಸ ಅಗಸನಕೊಪ್ಪ ಮತ್ತು ಹಲವರ ವಿರುದ್ಧ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಮನೆಗೆ ನುಗ್ಗಿ ಹಲ್ಲೆ

ಕಾಂಗ್ರೆಸ್ ಕಾರ್ಯಕರ್ತರು, ರಾಘವೇಂದ್ರ ಪೂಜಾರ ಅವರ ಮನೆಗೆ ನುಗ್ಗಿ, ಪ್ರಧಾನಿ ಮೋದಿಯವರ ಭಾವಚಿತ್ರ ಸ್ಟೇಟಸ್ ಇಡ್ತೀಯಾ, ಮೋದಿ ಪೋಸ್ಟ್​ಗೆ ಲೈಕ್‌ ಕೋಡ್ತಿಯಾ ಅಂತ ಹಲ್ಲೆ ಮಾಡಿದ್ದಾರೆಂದು ಆರೋಪ ವ್ಯಕ್ತವಾಗಿದೆ.

ಕಾರ್ಯಕರ್ತರು ಥರ್ಮಕೋಲ್ ಕಟರ್, ಕಲ್ಲು ಸಮೇತ ಬಂದು ಹಲ್ಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಹಲ್ಲೆ ವಿಷಯ ತಿಳಿಯುತ್ತಿದ್ದಂತೆ BJP ಟಿಕೆಟ್ ಆಕಾಂಕ್ಷಿ ರಾಜು ಕುರುಡಗಿ ಹಾಗೂ ಕಾರ್ಯಕರ್ತರು ಪೊಲೀಸ್ ಠಾಣೆಗೆ ತೆರಳಿ ಕೂಡಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

Related Articles

TRENDING ARTICLES