Wednesday, January 22, 2025

ಶಾಸಕಿ ಪೂರ್ಣಿಮಾ ಹೆಗಲ ಮೇಲೆ ‘ಕೈ’ಹಾಕಿದ ಯಡಿಯೂರಪ್ಪ

ಬೆಂಗಳೂರು : ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ವಂದತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಬಿ.ಎಸ್.ಯಡಿಯೂರಪ್ಪ, ಶಾಸಕಿ ಪೂರ್ಣಿಮಾ ಹೆಗಲ ಮೇಲೆ ಕೈಹಾಕಿ‌ ಕೆ.ಪೂರ್ಣಿಮಾ ನಮ್ಮ ಜೊತೆಗಿದ್ದಾರೆ. ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾದ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ನಮ್ಮ ನಿರೀಕ್ಷೆ ಮೀರಿದ ಉತ್ತಮ‌ ವಾತಾವರಣವಿದೆ. ಹಿರಿಯೂರಲ್ಲಿ ರೋಡ್ ಶೋ, ಚಿತ್ರದುರ್ಗದಲ್ಲಿ ಸಂಜೆ ಬಹಿರಂಗ ಸಭೆಯಿದೆ. ಚಿತ್ರದುರ್ಗ ಸಭೆಯಲ್ಲಿ  40ಸಾವಿರಕ್ಕೂ ಅಧಿಕ ಜನ‌ ಸೇರುತ್ತಾರೆ. 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಡಿಕೆಶಿ-ಸಿದ್ದು-ಎಚ್ಡಿಕೆಗೆ ಟಾಂಗ್

ನಾವೇ ಸಿಎಂ ಎಂದು ಕೆಲವರು ಬೊಬ್ಬೆ ಹೊಡೆಯುತ್ತಿದ್ದಾರೆ. ಕೆಲವರು ಮುಂದಿನ ಸಿಎಂ ನಾವೇ ಎನ್ನುವುದರಲ್ಲಿ ಅರ್ಥವಿಲ್ಲ. ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎನ್ನುವ ಮೂಲಕ ಸಿಎಂ ಹಿರಾದೆ ಹೊಂದಿರುವ ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಎಚ್.ಡಿ ಕುಮಾರಸ್ವಾಮಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದು, ಅದ್ಭುತ ಕಾರ್ಯಕ್ರಮ ಆಗಲಿದೆ. ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ ಸರಿಸಮ ಅಲ್ಲ. ಕಾಂಗ್ರೆಸ್ ಪಕ್ಷಕ್ಕೆ ಸೂಕ್ತವಾದ ನಾಯಕತ್ವ ಇಲ್ಲ. ಬಿಜೆಪಿಯ ಮುಖ್ಯಮಂತ್ರಿ ಯಾರೆಂಬುದು ಪಕ್ಷ ತೀರ್ಮಾನಿಸುತ್ತದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES