Saturday, April 20, 2024

ಮೋದಿಗೂ ಮೊದಲೇ ರಾಜ್ಯಕ್ಕೆ ಅಮಿತ್ ಶಾ : ಮೂರು ಪ್ರತಿಮೆ ಅನಾವರಣ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಭರದ ಸಿದ್ಧತೆ ನಡೆಸುತ್ತಿದ್ದು, ರಾಷ್ಟ್ರೀಯ ನಾಯಕರ ಆಗಮನವೇ ಕೇಸರಿ ಕಲಿಗಳ ಚುನಾವಣಾ ದಾಳವಾಗುತ್ತಿದೆ.

ಹೌದು, ಮುಂದಿನ 5 ದಿನಗಳಲ್ಲಿ 2 ಬಾರಿ ರಾಜ್ಯಕ್ಕೆ ಅಮಿತ್ ಶಾ ಭೇಟಿ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದೆ

ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಾಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿಯ ಚುನಾವಣಾ ಪ್ರಚಾರ ವೇಗ ಪಡೆದುಕೊಳ್ಳುತ್ತಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದೆ.

ಮಾರ್ಚ್ 24, 26ಕ್ಕೆ ಅಮಿತ್ ಶಾ

ಮುಂದಿನ ಐದು ದಿನಗಳಲ್ಲಿ ಅಮಿತ್ ಶಾ ಅವರು ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಲಿದ್ದಾರೆ. ಮಾರ್ಚ್ 24 ಮತ್ತು 26 ರಂದು ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಮೊದಲ ಭೇಟಿ ಸಂದರ್ಭದಲ್ಲಿ ಶಾ ಅವರು ಮೂರು ಪ್ರತಿಮೆಗಳನ್ನು ಅನಾವರಣಗೊಳಿಸಲಿದ್ದಾರೆ. ಬೆಂಗಳೂರಿನ ಸಂಸ್ಥಾಪಕ ಕೆಂಪೇಗೌಡ ಮತ್ತು ಲಿಂಗಾಯತ ಸಮಾಜ ಸುಧಾರಕ ಬಸವೇಶ್ವರರ ಪ್ರತಿಮೆಗಳನ್ನು ಅಮಿತ್ ಶಾ ಅವರು ವಿಧಾನಸೌಧದ ಮುಂಭಾಗದಲ್ಲಿ ಅನಾವರಣಗೊಳಿಸಲಿದ್ದಾರೆ.

ಶಾ ಬಳಿಕ ರಾಜ್ಯಕ್ಕೆ ಮೋದಿ

ಪ್ರಧಾನಿ ನರೇಂದ್ರ ಮೋದಿ ಇದೇ ಮಾರ್ಚ್ 25ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿಯವರು, ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತೆರಳಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ.

ನಂತರ ವೈಟ್‌ಫೀಲ್ಡ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲು ಮಧ್ಯಾಹ್ನ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಮೋಟ್ರೋಗೆ ಚಾಲನೆ ನೀಡಿ, ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ. ಬಳಿಕ ದಾವಣಗೆರೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ.

RELATED ARTICLES

Related Articles

TRENDING ARTICLES