ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಷ್ಟೇ ಭಾಕಿ ಉಳಿದಿದೆ. ಈ ಬಾರಿಯ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಬಿಡುಗಡೆ ದಿನ ಮತ್ತಷ್ಟು ಮುಂದಕ್ಕೆ ಹೋಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ಪಟ್ಟಿ ಬಿಡುಗಡೆ ವಿಳಂಬಕ್ಕೆ ಮತ್ತಷ್ಟು ಪುಷ್ಠಿ ನೀಡುತ್ತಿದೆ. ಅಭ್ಯರ್ಥಿಗಳ ಮೊದಲ ಇಂದು ಪಟ್ಟಿ ಬಿಡುಗಡೆಯಾಗಬೇಕಿತ್ತು. ಆದರೆ, ಹಬ್ಬಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಬಂದಿದ್ದಾರೆ. ಎರಡೂರು ದಿನಗಳಲ್ಲಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಮೊದಲ ಪಟ್ಟಿಯಲ್ಲಿ 110 ರಿಂದ 120 ಅಭ್ಯರ್ಥಿಗಳ ಆಯ್ಕೆ ಫೈನಲ್ ಆಗಿದೆ. ಸದ್ಯದ ಮಾಹಿತಿ ಪ್ರಕಾರ ಪಟ್ಟಿಯಲ್ಲಿ ಬಹುತೇಕ ಹಾಲಿ ಶಾಸಕರಿಗೆ ಎಐಸಿಸಿ ಮಣೆ ಹಾಕಲಿದೆ ಎಂದು ಹೇಳಲಾಗಿದೆ. ಇತ್ತ, ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ದೆಹಲಿಗೆ ಹೋಗಿ ಬಂದಿದ್ದು, ಹಲವರಿಗೆ ಟಿಕೆಟ್ ಕೈತಪ್ಪುವ ನಡುಕ ಉಂಟಾಗಿರುವುದು ಸುಳ್ಳಲ್ಲ.
ಇದನ್ನೂ ಓದಿ : ರಾಹುಲ್ ಗಾಂಧಿ ಜೀವನದಲ್ಲಿ ಒಂದೇ ಒಂದು ದಿನ ಕೆಲಸಕ್ಕೆ ಹೋಗಿಲ್ಲ : ತೇಜಸ್ವಿ ಸೂರ್ಯ ಲೇವಡಿ
ಬಿಜೆಪಿ ವಿರುದ್ಧ ಡಿಕೆಶಿ ಕಿಡಿ
ಜನತೆಗೆ ಕೊಟ್ಟ ಭರವಸೆಗಳನ್ನು ಈಡೇರಿಸದೆ ಬಿಜೆಪಿ ಮೋಸ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇದೇ ವೇಳೆ ಕಿಡಿಕಾರಿದ್ದಾರೆ. 9 ವರ್ಷಗಳ ಹಿಂದೆ ಅಧಿಕಾರಕ್ಕೆ ಬರುವ ಮೊದಲು ವರ್ಷಕ್ಕೆ 2 ಕೋಟಿ ಉದ್ಯೋಗ ಹಾಗೂ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುವ ಭರವಸೆ ಕೊಟ್ಟಿದ್ದ ಬಿಜೆಪಿ ಅದನ್ನು ಈಡೇರಿಸಿಲ್ಲ.
ಈಗ ಕಾಂಗ್ರೆಸ್ ರಾಜ್ಯದಲ್ಲಿ ನೀಡಿರುವ ಗ್ಯಾರೆಂಟಿಗಳ ಬಗ್ಗೆ ಭಯಪಡುತ್ತಿದೆ. ಕಾಂಗ್ರೆಸ್ ಕೊಟ್ಟಿರುವ ಗ್ಯಾರೆಂಟಿಯನ್ನು ಈಡೇರಿಸುವುದು ಖಚಿತ ಎಂದು ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.