Wednesday, January 22, 2025

SSLC Exam 2023 : ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ನಿಷೇಧಾಜ್ಞೆ

ಬೆಂಗಳೂರು : ಇದೇ ಮಾರ್ಚ್ 31ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ ಬರೋಬ್ಬರಿ 200 ಮೀಟರ್‌ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಈ ಪ್ರದೇಶದಲ್ಲಿ ಜೆರಾಕ್ಸ್‌ ಮತ್ತು ಸೈಬರ್‌ ಸೆಂಟರ್‌ಗಳನ್ನು ತೆರೆಯುವಂತಿಲ್ಲ ಎಂದು ಆದೇಶ ಹೊರಡಿಸಲಾಗಿದೆ. ರಾಜ್ಯಾದ್ಯಂತ ಮಾ.31 ರಿಂದ ಏ.15ರವರೆಗೆ ನಡೆಯುವ ಪರೀಕ್ಷೆಯ ದಿನಗಳ ವೇಳೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

ವಿದ್ಯಾರ್ಥಿಗಳು ಪರೀಕ್ಷೆಯನ್ನು ಸೂತ್ರವಾಗಿ ಬರೆಯಲು ಅನುಕೂಲ ಆಗುವಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ಒಳಗಿನ ಜೆರಾಕ್ಸ್ ಅಂಗಡಿ ಮತ್ತು ಸೈಬರ್ ಸೆಂಟರ್‌ಗಳನ್ನು ಮುಚ್ಚುವಂತೆ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : ಪಬ್ಲಿಕ್ ಪರೀಕ್ಷೆ : ಹೀಗಿದೆ ನ್ಯಾಯಾಲಯದ ತೀರ್ಪು

ಪರೀಕ್ಷೆ ಸಮಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. 10ನೇ ತರಗತಿ ಪರೀಕ್ಷೆ ಬರೆಯಲು ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ.

ಪರೀಕ್ಷಾ ವೇಳಾಪಟ್ಟಿ

  • ಮಾ.31ರಂದು ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್, ಸಂಸ್ಕೃತ.)
  • ಏ.4ರಂದು ಗಣಿತ, ಸಮಾಜಶಾಸ್ತ್ರ
  • ಏ.6ರಂದು ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)
  • ಏ.8ರಂದು ಕೋರ್ ವಿಷಯ, ಅರ್ಥಶಾಸ್ತ್ರ
  • ಏ.10ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ
  • ಏ.12ರಂದು ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ)
  • ಏ.15ರಂದು ಸಮಾಜ ವಿಜ್ಞಾನ

RELATED ARTICLES

Related Articles

TRENDING ARTICLES