Monday, December 23, 2024

ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕ್ಷಣಗಣನೆ : RRR ಸ್ಟಾರ್ ಸೇರಿದಂತೆ ಗಣ್ಯರು ಭಾಗಿ

ಬೆಂಗಳೂರು: ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಇಂದು ಸಂಜೆ 4.30 ಗಂಟೆಗೆ ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮುಂದೆ 14ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ.

ಕರ್ನಾಟಕ ‌ಚಲನಚಿತ್ರ ಅಕಾಡೆಮಿ, ಕರ್ನಾಟಕ ‌ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ವಾರ್ತಾ ಮತ್ತು ಪ್ರಸಾರ ಇಲಾಖೆ ಸಹಯೋಗದಲ್ಲಿ ಸಮಾರಂಭ ನಡೆಯಲಿದ್ದು, ಈಗಾಗಲೇ ಸಿದ್ಧತೆ ಭರದಿಂದ ಸಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಸಹೋದ್ಯೋಗಿಗಳು, ಕನ್ನಡ, ತಮಿಳು, ತೆಲುಗು, ಹಿಂದಿ ಮಲಯಾಳಿ ಸೇರಿದಂತೆ ಜಗತ್ತಿನ ಚಲನಚಿತ್ರ ದಿಗ್ಗಜರು ಭಾಗವಹಿಸಲಿದ್ದಾರೆ. ಸ್ಟೇಜ್ ಹಾಕುವ ಕೆಲಸ ಪೂರ್ಣಗೊಂಡಿದ್ದು, ವಿದ್ಯುತ್ ಅಲಂಕಾರ ಸೇರಿದಂತೆ ಇತರೆ ಸಿದ್ಧತೆ ನಡೆಯುತ್ತಿದೆ.

ಈ ಕುರಿತು ಪವರ್ ಟಿವಿ ಜೊತೆ ಮಾತನಾಡಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಅಶೋಕ್ ಕಶ್ಯಪ್, 14ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಇಂದಿನಿಂದ ಶುರುವಾಗಿದ್ದು, ಮಾರ್ಚ್ 31ರವರೆಗೆ ನಡೆಯಲಿದೆ. ಈ ಬಾರಿ ಚಲನಚಿತ್ರೋತ್ಸವದಲ್ಲಿ ಸುಮಾರು 60ಕ್ಕೂ ಹೆಚ್ಚು ದೇಶಗಳ ಒಟ್ಟು 300 ಚಿತ್ರಗಳು 13 ಸ್ಕ್ರೀನ್ ಗಳಲ್ಲಿ ಪ್ರದರ್ಶನವಾಗಲಿದೆ ಎಂದು ಹೇಳಿದ್ದಾರೆ.

RRR ಖ್ಯಾತಿಯ ವಿಜಯೇಂದ್ರ ಪ್ರಸಾದ್ ಭಾಗಿ

ಈ ಬಾರಿ ಅತಿಹೆಚ್ಚು ಈ ಬಾರಿ ಚಲನಚಿತ್ರೋತ್ಸವಕ್ಕೆ ಇರಾನಿ ಫಿಲಂಮೆಕರ್ ಜಾಫರ್ ಫನಾಯಿ ಅವರ ಮಗ ಫನಾಫನಾಯಿ, ನೇಪಾಳದಿಂದ ಅಭಿನಾಶ್, ಶ್ರೀಲಂಕಾದಿಂದ ವಿಮುಕ್ತಿ ಜೈಸೂರಿ, RRR ಖ್ಯಾತಿಯ ವಿಜಯೇಂದ್ರ ಪ್ರಸಾದ್ ಸೇರಿದಂತೆ ಹಲವು ಗಣ್ಯರು ಈ ಬಾರಿಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಈ ಬಾರಿಯ  ಚಲನಚಿತ್ರೋತ್ಸವದಲ್ಲಿ ಖ್ಯಾತ ನಟ ನರಸಿಂಹರಾಜು ಅವರ ಶತಮಾನೋತ್ಸವವನ್ನು ಆಚರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES