Thursday, January 9, 2025

ಶ್ರವಣಬೆಳಗೊಳ ಸ್ವಾಮೀಜಿ ಸಾವಿಗೆ ಸ್ಫೋಟಕ ಟ್ವಿಸ್ಟ್

ಬೆಂಗಳೂರು : ಶ್ರವಣಬೆಳಗೊಳದ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಅನಾರೋಗ್ಯದಿಂದ ಸಾವನ್ನಪ್ಪಿಲ್ಲ ಎಂಬ ಸುದ್ದಿ ಬಹಿರಂಗವಾಗಿದೆ.

ಹೌದು, ಸ್ವಾಮೀಜಿ ಇಂದು ಬೆಳಗ್ಗೆ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ ಎನ್ನಲಾಗಿತ್ತು. ಆದರೆ, ಕಾಲು ಜಾರಿ ಬಿದ್ದು ಸ್ವಾಮೀಜಿ ಮೃತಪಟ್ಟಿದ್ದಾರೆ ಎಂದು ಹಾಸನ ಜಿಲ್ಲಾಧಿಕಾರಿ ಅರ್ಚನಾ ಮಾಹಿತಿ ನೀಡಿದ್ದಾರೆ.

ಇಂದು ಮುಂಜಾನೆ ನಿತ್ಯಕರ್ಮಕ್ಕೆ ಎದ್ದಾಗ ನಿಯಂತ್ರಣ ತಪ್ಪಿ ಶ್ರೀಗಳು ಕಾಲು ಜಾರಿ ಬಿದ್ದಿದ್ದಾರೆ. ಈ ವೇಳೆ ಅವರ ತಲೆಗೆ ತೀವ್ರ ಪೆಟ್ಟಾಗಿತ್ತು. ಕೂಡಲೇ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸ್ವಾಮೀಜಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಶ್ರೀಗಳು ಮೇ 3, 1949ರಲ್ಲಿ ವಾರಂಗದಲ್ಲಿ ಶ್ರೀಗಳು ಜನಿಸಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಕೊಡುಗೆ ನೀಡಿರುವ ಈ ಸ್ವಾಮೀಜಿಯವರು ಎಂಜಿನಿಯರಿಂಗ್, ಮೆಡಿಕಲ್ ಪದವಿಗಳಿಗೆ ಕಡಿಮೆ ಶುಲ್ಕ ಪಡೆದು ಅನೇಕರಿಗೆ ವಿದ್ಯಾದಾನ ಮಾಡಿರುವ ಕೀರ್ತಿಗೆ ಪಾತ್ರರಾಗಿದ್ದಾರೆ.

 

RELATED ARTICLES

Related Articles

TRENDING ARTICLES