Wednesday, January 22, 2025

ಬಿಜೆಪಿ ದಲಿತರಿಗೆ ಅವಮಾನ, ಮೋಸ ಮಾಡುತ್ತಿದೆ : ಡಿ.ಕೆ ಶಿವಕುಮಾರ್ ಕಿಡಿ

ಬೆಂಗಳೂರು : ಬಿಜೆಪಿ ಸರ್ಕಾರ ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮುದಾಯದ ಜನರ ಕಿವಿಗೆ ಹೂವ ಇಟ್ಟು, ಅವಮಾನ ಹಾಗೂ ಮೋಸ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮಿಸಲಾತಿ ಹೆಚ್ಚಳ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸದೇ, ಸಂವಿಧಾನದ 9ನೇ ಶೆಡ್ಯುಲ್ ನಲ್ಲಿ ಸೇರಿಸದೇ ಮೀಸಲಾತಿ ಹೆಚ್ಚಳ ಮಾಡುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜಭವನದ ಮುಂದೆ ಪ್ರತಿಭಟನೆ

ರಾಜ್ಯ ಸರ್ಕಾರ ಪರಿಶಿಷ್ಟರಿಗೆ ಮೀಸಲಾತಿ ವಿಚಾರದಲ್ಲಿ ಮಾಡುತ್ತಿರುವ ಮೋಸವನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ರಾಜಭವನದ ಮುಂದೆ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ದಲಿತರಿಗೆ ಮೋಸ ಮಾಡ್ತಿದೆ

ಬಿಜೆಪಿ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಮೀಸಲಾತಿ ಹೆಚ್ಚಳ ಮಾಡುವ ವಿಚಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಬಿಜೆಪಿ ಸಚಿವರು ಸಂಸತ್ತಿನಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ, ಇವರು ಮೀಸಲಾತಿ ಮಾಡಿದ್ದೇವೆ ಎಂದು ದಲಿತರಿಗೆ ಮೋಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ದ್ರೋಹವನ್ನು ಖಂಡಿಸಲು ನಮ್ಮ ಪಕ್ಷದ ನಾಯಕರೆಲ್ಲರೂ ರಾಜ್ಯಪಾಲರ ಭೇಟಿಗೆ ತೀರ್ಮಾನಿಸಿದ್ದು, ಶುಕ್ರವಾರ ಬೆಳಗ್ಗೆ ಭೇಟಿಗೆ ರಾಜ್ಯಪಾಲರ ಬಳಿ ಸಮಯಾವಕಾಶ ಕೇಳುತ್ತೇವೆ. ಮೀಸಲಾತಿ ವಿಚಾರದಲ್ಲಿ ತಮಗೆ ಬೇಕಾದ ರೀತಿಯಲ್ಲಿ ಸುಳ್ಳು ಹೇಳಿದರೆ ಅದನ್ನು ನಂಬಲು ಇಲ್ಲಿ ಯಾರೂ ಸಿದ್ಧರಿಲ್ಲ ಎಂದು ಡಿಕೆಶಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES