Wednesday, January 22, 2025

ರಾಹುಲ್ ಗಾಂಧಿಗೆ ಎರಡು ವರ್ಷ ಶಿಕ್ಷೆ, ಜಾಮೀನು : ಜೈಲು ಪಾಲಾಗ್ತಾರಾ ರಾಹುಲ್ ಗಾಂಧಿ

ಬೆಂಗಳೂರು : 2019ರ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ರಾಜ್ಯದ ಕೋಲಾರದಲ್ಲಿ ಮೋದಿ ಉಪನಾಮ ಹೊಂದಿದ್ದವರೆಲ್ಲಾ ಕಳ್ಳರು ಎಂದು ವಿವಾದಾತ್ಮಕ ಹೇಳಿಕೆ ಹರಿಬಿಟ್ಟಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಂಕಷ್ಟ ಎದುರಾಗಿದೆ.

ಹೌದು, ಗುಜರಾತ್ ನ ಸೂರತ್ ನ್ಯಾಯಾಲಯದಲ್ಲಿ ಈ ಬಗ್ಗೆ ಶಾಸಕ ಪೂರ್ನೇಶ್ ಮೋದಿ ಎಂಬುವವರು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಹಾಗೂ ಮಾನ ನಷ್ಟ ಪ್ರಕರಣ ದಾಖಲಿಸಿದ್ದರು. ಅದರ ವಿಚಾರಣೆ ನಡೆಸಿರುವ ನ್ಯಾಯಾಲಯ, ರಾಹುಲ್ ಗಾಂಧಿ ದೋಷಿ ಎಂದು ಹೇಳಿದೆ. ರಾಹುಲ್ ಗಾಂಧಿಗೆ ಎರಡು ವರ್ಷ ಶಿಕ್ಷ ವಿಧಿಸಿದೆ. ಅಲ್ಲದೆ, ಜಾಮೀನು ಕೂಡ ನೀಡಿದೆ.

ಸೆಕ್ಷನ್ 499, 500ರ ಅಡಿ ಪ್ರಕರಣ

ಭಾರತೀಯ ದಂಡ ಸಂಹಿತೆ ಸೆಕ್ಷನ್ 499 ಮತ್ತು 500ರ ಅಡಿಯಲ್ಲಿ ರಾಹುಲ್ ಗಾಂಧಿಯ ಮೇಲೆ ಪ್ರಕರಣ ದಾಖಲಾಗಿದೆ. 2021ರ ಅಕ್ಟೋಬರ್‌ನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ರಾಹುಲ್ ಗಾಂಧಿಯ ಸೂರತ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಇದೀಗ, ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಎಚ್‌ಎಚ್ ವರ್ಮಾ, ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ. ಬಳಿಕ ಜಾಮೀನು ಮಂಜೂರು ಮಾಡಿ, 30 ದಿನಗಳ ಕಾಲ ಶಿಕ್ಷೆಯನ್ನು ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.

RELATED ARTICLES

Related Articles

TRENDING ARTICLES