Monday, December 23, 2024

ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತೇವೆ : ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ

ನವದೆಹಲಿ : ಅದಾನಿ ವಿಚಾರದಲ್ಲಿ ಜೆಪಿಸಿಗಾಗಿ ತಿಂಗಳುಗಟ್ಟಲೆ ಹೋರಾಟ ನಡೆಸುತ್ತಿದ್ದೇವೆ. ಅವರಿಗೆ ಬಹುಮತವಿದೆ. ಆದರೆ, ಬಿಜೆಪಿಗೆ ಏನೋ ಎಂಬ ಭಯವಿದೆ. ಅದಕ್ಕಾಗಿ ಒಗ್ಗಟ್ಟಿನಿಂದ ಹೋರಾಟ ನಡೆಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ವಿಜಯ್ ಚೌಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯವರಿಗೆ ಸೂರತ್ ನ್ಯಾಯಾಲಯ ಶಿಕ್ಷೆ ವಿಧಿಸಿರುವ ವಿಚಾರವನ್ನು ಪ್ರಸ್ತಾಪಿಸಿ ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಕೇಸ್ ಗಳನ್ನು ಗುರಿಯಾಗಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಜಾಪ್ರಭುತ್ವ ಅಪಾಯದಲ್ಲಿದೆ

ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಆರೋಪಿಸಿ ಮತ್ತು ಅದಾನಿ ಪ್ರಕರಣವನ್ನು ಜೆಪಿಸಿ ತನಿಖೆಗೆ ಒತ್ತಾಯಿಸಿ ಪ್ರತಿಪಕ್ಷಗಳು ದೆಹಲಿಯ ಸಂಸತ್ತಿನಿಂದ ವಿಜಯ್ ಚೌಕ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿವೆ.

ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿದ ನಂತರ ಸಿಪಿಐ, ಸಿಪಿಎಂ, ಉದ್ದವ್ ಠಾಕ್ರೆ ಬಣದ ಶಿವಸೇನೆ, ಜೆಡಿಯು ಮತ್ತು ಆಮ್ ಆದ್ಮಿ ಪಾರ್ಟಿಯಂತಹ ಪಕ್ಷಗಳ ಮುಖಂಡರು ವಿಜಯ್ ಚೌಕ್ ಗೆ ಮೆರವಣಿಗೆ ನಡೆಸಿದರು. ನಾವು ಜೆಪಿಸಿ ಮತ್ತು ಎಲ್ಐಸಿ ಉಳಿಸಿ ಎಂದು ಒತ್ತಾಯಿಸುತ್ತೇವೆ ಮತ್ತು ಡೆಮಾಕ್ರೆಸಿ ಇನ್ ಡೇಂಜರ್ ಎಂದು ಬರೆದಿರುವ ಬೃಹತ್ ಬ್ಯಾನರ್ ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

RELATED ARTICLES

Related Articles

TRENDING ARTICLES