ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಷ್ಟೇ ಬಾಕಿ ಉಳಿದಿದೆ. ಈ ಬಾರಿಯ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಲಿದೆ.
ಹೌದು, ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ಮಾಡಿಕೊಂಡಿರುವcongress-first-list-of-candidates ಕಾಂಗ್ರೆಸ್, ಇನ್ನು ಕೆಲವೇ ಕ್ಷಣಗಳಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಇದಕ್ಕೆ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪಟ್ಟಿಯಲ್ಲಿ ಯಾರೆಲ್ಲಾ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ ಎಂಬುದು ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ಕುತೂಹಲ ಮೂಡಿಸಿದೆ.
ಮೊದಲ ಪಟ್ಟಿಯಲ್ಲಿ 110 ರಿಂದ 120 ಅಭ್ಯರ್ಥಿಗಳ ಆಯ್ಕೆ ಫೈನಲ್ ಆಗಿದೆ. ಸದ್ಯದ ಮಾಹಿತಿ ಪ್ರಕಾರ ಪಟ್ಟಿಯಲ್ಲಿ ಬಹುತೇಕ ಹಾಲಿ ಶಾಸಕರಿಗೆ ಎಐಸಿಸಿ ಮಣೆ ಹಾಕಲಿದೆ ಎಂದು ಹೇಳಲಾಗಿದೆ. ಇತ್ತ, ಪ್ರಿಯಾಂಕ್ ಖರ್ಗೆ ದೆಹಲಿಗೆ ಹೋಗಿ ಬಂದಿದ್ದು, ಕೊನೆಯ ಕ್ಷನದಲ್ಲಿ ಯಾರಿಗೆ ಟಿಕೆಟ್ ಮಿಸ್ ಆಗುತ್ತೆ ಎಂದು ಕಾದುನೋಡಬೇಕಿದೆ.
2 ಕ್ಷೇತ್ರಗಳಲ್ಲಿ ನಿಲ್ತಾರಾ ಸಿದ್ದರಾಮಯ್ಯ
ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ, ಎಂ.ಬಿ ಪಾಟೀಲ್, ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ ಸೇರಿದಂತೆ ಘಟಾನುಘಟಿಗಳಿಗೆ ಮೊದಲ ಲಿಸ್ಟ್ ನಲ್ಲೇ ಟಿಕೆಟ್ ಅಂತಿಮವಾಗಿದೆ. ಆದರೆ, ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡ್ತಾರಾ? ವರುಣಾದಿಂದ ಕಣಕ್ಕಿಳಿತಾರಾ? ಅಥವಾ ಎರಡೂ ಕ್ಷೇತ್ರಗಳಲ್ಲಿ ನಿಲ್ತಾರಾ ಅನ್ನೋದಕ್ಕೆ ಉತ್ತರ ಸಿಕ್ಕಿಲ್ಲ.